66 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸಬಹುದು

Badhra
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6355554, 0.5078927);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 48;
Published on

ಚಿತ್ರದುರ್ಗ: ಕರ್ನಾಟಕದ 66 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಅವಕಾಶವಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದರಲ್ಲಿ ಬೃಹತ್ ನೀರಾವರಿ ಇಲಾಖೆಯಡಿ 40 ಲಕ್ಷ ಹೆಕ್ಟೇರ್‌ನಲ್ಲಿ 30 ಲಕ್ಷ, ಸಣ್ಣ ನೀರಾವರಿ ಇಲಾಖೆಯಡಿ 10 ಲಕ್ಷದ ಪೈಕಿ 7 ಲಕ್ಷ ಹೆಕ್ಟೇರ್‌ನಲ್ಲಿ ನೀರಾವರಿ ಸೌಲಭ್ಯವಾಗಿದೆ. ಇನ್ನೂ 13 ಲಕ್ಷ ಹೆಕ್ಟೇರ್ ಬಾಕಿ ಉಳಿದಿದೆ. ಸ್ವಂತ ಖರ್ಚಿನಿಂದ ರೈತರು ಇನ್ನುಳಿದ 16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಮಾಡಿಕೊಳ್ಳಬಹುದಾಗಿದೆ ಎಂದರು.

ದೇಶದಲ್ಲಿ ಎರಡು ಜಿಲ್ಲೆಗಳು ಮಾತ್ರ ಕಳೆದ 350 ವರ್ಷಗಳಿಂದ ಭೀಕರ ಬರಗಾಲ ಎದುರಿಸಿದ್ದವು. ಒಂದು ರಾಜಸ್ತಾನದಲ್ಲಿದ್ದರೆ, ಮತ್ತೊಂದು ಅವಿಭಜಿತ ವಿಜಯಪುರ ಜಿಲ್ಲೆಯಾಗಿತ್ತು. ಆದರಿಂದು ಆಲಮಟ್ಟಿ ಜಲಾಶಯ ನಿರ್ಮಾಣದಿಂದಾಗಿ ವಿಜಯಪುರ, ಬಾಗಲಕೋಟೆ ಜಿಲ್ಲೆಗಳು ಆ ಪಟ್ಟಿಯಿಂದ ಹೊರಬಂದಿವೆ. ಈಗ ಭಾರತದಲ್ಲೇ ಬರ ಪರಿಸ್ಥಿತಿ ಎದುರಿಸುವ 2ನೇ ಸ್ಥಾನ ಚಿತ್ರದುರ್ಗ ಪಡೆದಿದೆ. ಇಲ್ಲಿಂದ ಪ್ರತಿ ವರ್ಷ 50 ಸಾವಿರ ಮಂದಿ ಗುಳೆ ಹೋಗುತ್ತಿದ್ದಾರೆ ಎಂದು ಬೇಸರಿಸಿದರು.

ರೈತರು ಸೇರಿ ಎಲ್ಲ ವರ್ಗ, ಸಮುದಾಯದ ಬದುಕನ್ನು ಹಸನಾಗಿಸಲು ನೀರಾವರಿಯಿಂದ ಮಾತ್ರ ಸಾಧ್ಯ. ಎನ್‌ಡಿಎ ಸರ್ಕಾರದ ರಾಯಭಾರಿಯಾಗಿ, ಪ್ರಧಾನಿ ನರೇಂದ್ರಮೋದಿ ಅವರ ಪ್ರತಿನಿಧಿಯಾಗಿ ಚಿತ್ರದುರ್ಗದಿಂದ ಗೆದ್ದಿದ್ದೇನೆ. 2023-24ರ ಕೇಂದ್ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ. ಅನುದಾನ ಕಾಯ್ದಿರಿಸಿದ್ದು, ಅದನ್ನು ತರುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿ, ಆಲಮಟ್ಟಿ ಜಲಾಶಯ ನಿರ್ಮಿಸುವಾಗ ರಾಜ್ಯ ಸರ್ಕಾರ ಕೃಷ್ಣ ಜಲಭಾಗ್ಯ ನಿಗಮದ ಮೂಲಕ ಬಾಂಡ್ ಬಿಡುಗಡೆಗೊಳಿಸಿ ಸಂಪನ್ಮೂಲ ಕ್ರೋಡೀಕರಿಸಿತ್ತು. ಅದೇ ರೀತಿ ಭದ್ರಾ ಮೇಲ್ಡಂಡೆಗೂ ಹಣ ಸಂಗ್ರಹಿಸಲಿ. ಜಿಲ್ಲೆಯ ಉದ್ಯಮಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಖರೀದಿಸುತ್ತಾರೆ ಎಂದರು.

ಹೋರಾಟಕ್ಕೆ ನಾನೂ ದನಿಯಾಗುವೆ: ಭದ್ರಾ ಮೇಲ್ದಂಡೆಗಾಗಿ ಚಿತ್ರದುರ್ಗದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ನಾನೂ ದನಿಯಾಗುವೆ. ನಿಮ್ಮೊಂದಿಗೆ ಜೊತೆಗಿದ್ದು, ಹೋರಾಟ ಮಾಡುವೆ. ಮುಂದಿನ 2 ವರ್ಷಗಳಲ್ಲಿ ಭದ್ರಾ ಮೇಲ್ದಂಡೆ ಕಾಮಗಾರಿ ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಸಂಸದರು ಆಶ್ವಾಸನೆ ನೀಡಿದರು.

ಇದೇ ವೇಳೆ ಸಂಸದರನ್ನು ಸಮಿತಿಯಿಂದ ಸನ್ಮಾನಿಸಲಾಯಿತು. ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ರೈತಸಂಘದ ಮುಖಂಡರಾದ ಕೆ.ಪಿ.ಭೂತಯ್ಯ, ಕೆ.ಸಿ.ಹೊರಕೇರಪ್ಪ, ಹಂಪಯ್ಯನಮಾಳಿಗೆ ಧನಂಜಯ, ಡಿ.ಎಸ್.ಹಳ್ಳಿ ಸುಧಾ, ಜೆ.ಯಾದವರೆಡ್ಡಿ, ಹಿರೇಕಬ್ಬಿಗೆರೆ ನಾಗರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಮಲ್ಲಾಪುರ ತಿಪ್ಪೇಸ್ವಾಮಿ, ಜಿ.ಬಿ.ಶೇಖರ್, ಸಿಪಿಐನ ಜಿಲ್ಲಾ ಕಾರ್ಯದರ್ಶಿ ಜಿ.ಸುರೇಶ್‌ಬಾಬು, ಸಮಿತಿ ಸಂಚಾಲಕ ಜಿಕ್ಕಪ್ಪನಹಳ್ಳಿ ಷಣ್ಮುಖ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net