67 ಲಕ್ಷ ರೂ. ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಭೂಮಿ ಪೂಜೆ ನೆರವೇರಿಸಿದ ಶಾಸಕ ನಿಸರ್ಗ ನಾರಾಯಣಸ್ವಾಮಿ ಲೋಕೋಪಯೋಗಿ ಇಲಾಖೆಯಿಂದ ಕಾಮಗಾರಿ

05 dhl Ambedkar bhavana news- ph-4
Published on

ದೇವನಹಳ್ಳಿ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ನಿಸರ್ಗ ನಾರಾಯಣಸ್ವಾಮಿ ಸೋಮವಾರ ಭೂಮಿಪೂಜೆ ನೆರವೇರಿಸಿದರು.

ಬಹುಜನರ ನಿರೀಕ್ಷೆಯಂತೆ ಅಂಬೇಡ್ಕರ್ ಭವನದ ಸುತ್ತ ಕಾಂಪೌಂಡ್ ನಿರ್ಮಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯು 67 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಿರ್ವಹಿಸಲಿದೆ. ಇದಕ್ಕಾಗಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಶಾಸಕರು ಮಾಹಿತಿ ನೀಡಿದರು.

ಬೀದಿಬದಿ ವ್ಯಾಪಾರಿಗಳ ತೆರವು: ಅಂಬೇಡ್ಕರ್ ಭವನಕ್ಕೆ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗದಿರಲಿ ಎಂಬ ಕಾರಣಕ್ಕಾಗಿ ಭವನದ ಸುತ್ತ ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲಾಗಿದೆ. ಬೇರೆಡೆ ವ್ಯಾಪಾರ ಮಾಡಲು ಅವರೆಲ್ಲರಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕರು ಹೇಳಿದರು.

ಸಮಾಜ ಕಲ್ಯಾಣ ಅಧಿಕಾರಿ ಚನ್ನಬಸಪ್ಪ, ಲೋಕೋಪಯೋಗಿ ಇಲಾಖೆ ಎಇಇ ಕೃಷ್ಣಪ್ಪ, ತಾಪಂ ಮಾಜಿ ಅಧ್ಯಕ್ಷ ಬಿ.ಕೆ. ಶಿವಪ್ಪ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಮಾದಿಗ ದಂಡೋರದ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ಜಿಲ್ಲಾಧ್ಯಕ್ಷ ಜಿ. ಮಾರಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net