ಶಿಕ್ಷಕರ ನೇಮಕಾತಿಗೆ ಸರ್ಕಾರ ಕ್ರಮ

21-GPT-2
Published on

ಗುಂಡ್ಲುಪೇಟೆ: ಸರ್ಕಾರಿ ಶಾಲೆಗಳಲ್ಲಿ ಕೊರತೆ ಇರುವ ಶಿಕ್ಷಕರ ಹುದ್ದೆಗಳನ್ನು ಮುಂದಿನ ದಿನಗಳಲ್ಲಿ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು ಎಂದು ಶಾಸಕ ಎಚ್.ಎಂ.ಗಣೇಶ್‌ಪ್ರಸಾದ್ ತಿಳಿಸಿದರು.

ತಾಲೂಕಿನ ಚಿಕ್ಕತುಪ್ಪೂರು ಸಮೀಪದ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಲೂಕು ಸೇರಿದಂತೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿವಿಧ ಇಲಾಖೆಯಲ್ಲೂ ಸಿಬ್ಬಂದಿ ಕೊರತೆ ಹೆಚ್ಚಾಗಿದೆ. ಆದ್ದರಿಂದ ಶೀಘ್ರದಲ್ಲೇ ಸರ್ಕಾರ ವಿವಿಧ ನೇಮಕಾತಿ ಕೈಗೊಳ್ಳುವ ಮೂಲಕ ಭರ್ತಿ ಮಾಡಲಿದೆ ಎಂದರು.

ಕಬ್ಬಹಳ್ಳಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸಿದ್ದರಾಜಪ್ಪ ಮುಖ್ಯಭಾಷಣ ಮಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಎನ್.ಕುಮಾರ್, ತಾಪಂ ಇಒ ರಾಮಲಿಂಗಯ್ಯ, ಬನ್ನಿತಾಳಪುರ ಗ್ರಾಪಂ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಲಕ್ಷ್ಮೀ, ವಿದ್ಯಾರ್ಥಿಗಳು ಮತ್ತು ಪಾಲಕರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net