ನ.01ರಂದು 69ನೇ ಕರ್ನಾಟಕ ರಾಜ್ಯೋತ್ಸವ

Published on

ಬಳ್ಳಾರಿ : ಜಿಲ್ಲಾಡಳಿತ ವತಿಯಿಂದ ನ.01 ರಂದು ಬೆಳಗ್ಗೆ 09 ಗಂಟೆಗೆ ನಗರದ ಸರ್ಕಾರಿ (ಮಾಜಿ ಪುರಸಭೆ) ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 69 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಧ್ವಜಾರೋಹಣ ನೆರವೇರಿಸಿ, ಶ್ರೀಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು. ಬಳಿಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಸಂದೇಶ ನೀಡುವರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net