

ಹನೂರು: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನ.6 ರಂದು ಬೆಂಗಳೂರಿನಲ್ಲಿ ಅಯೋಜಿಸಿರುವ ಅಭಿನಂದನಾ ಕಾರ್ಯಕ್ರಮಕ್ಕೆ ಹನೂರು ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಾಸಕ ಅರ್.ನರೇಂದ್ರ ಮನವಿ ಮಾಡಿದರು.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಯೋಜಿಸಲಾಗಿರುವ ಅಭಿನಂದನಾ ಕಾರ್ಯಕ್ರಮದ ಸಂಬಂಧ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರು ಸುದೀರ್ಘ ರಾಜಕೀಯ ಸೇವೆಯನ್ನು ಸಲ್ಲಿಸಿದ್ದಾರೆ. ಇದುವರೆಗೂ 9 ಬಾರಿ ಜಯ ಗಳಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಂತ್ರಿಮಂಡಲದ ಹುದ್ದೆಗಳನ್ನು ದಕ್ಷತೆಯಿಂದ ನಿರ್ವಹಿಸಿದ್ದಾರೆ. ಅಲ್ಲದೇ, ಪಕ್ಷ ಸಂಘಟನೆಯಲ್ಲಿ ಇವರ ಪಾತ್ರ ಹಿರಿದು. ಹಾಗಾಗಿ ಪಕ್ಷ ನಿಷ್ಠೆಯನ್ನು ಮನಗಂಡು ಸೋನಿಯಾ ಗಾಂಧಿ ಅವರು ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿರುವುದೇ ಸಾಕ್ಷಿ. ಈ ದಿಸೆಯಲ್ಲಿ ಪಕ್ಷದ ವತಿಯಿಂದ ಖರ್ಗೆ ಅವರಿಗೆ ನ.6 ರಂದು ಬೆಂಗಳೂರಿನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ರಾಮಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೆರಾಜು, ಹನೂರು ಯೂತ್ ಅಧ್ಯಕ್ಷ ಮಾದೇಶ್, ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಸಂಪತ್‌ಕುಮಾರ್, ಗ್ರಾಪಂ ಅಧ್ಯಕ್ಷೆ ಸುಧಾ, ಸದಸ್ಯ ಅಶೋಕ್‌ಕುಮಾರ್, ತಾ.ಪಂ. ಮಾಜಿ ಅಧ್ಯಕ್ಷ ಮುರುಡೇಶ್ವರಸ್ವಾಮಿ, ಮುಖಂಡರಾದ ವೆಂಕಟರಮಣನಾಯ್ಡು, ಮುಕುಂದವರ್ಮ, ಪುಟ್ಟವೀರನಾಯ್ಕ, ಉದ್ದನೂರು ಸಿದ್ದರಾಜು, ಬೂದುಬಾಳು ರಾಜೇಶ್, ಜಿ.ಕೆ. ಹೊಸೂರು ಮಹದೇವಸ್ವಾಮಿ ಹಾಗೂ ಇನ್ನಿತರರು ಇದ್ದರು.ಫೋಟೋ