ಚಾಮರಾಜನಗರ: ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ಛತ್ರಪತಿ ಶಾಹು ಮಹಾರಾಜ್ ಮತ್ತು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಜು.6 ರಂದು ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮವನ್ನು ಸಂಸದ ಸುನೀಲ್ ಬೋಸ್ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಶಾಸಕ ಕೆ.ವಿವೇಕಾನಂದ ಪುಷ್ಪಾರ್ಚನೆ ನೆರವೇರಿಸುವರು. ಅಕ್ಕ ಐಎಎಸ್ ಅಕಾಡೆಮಿಯ ಸಂಸ್ಥಾಪಕ ನಿರ್ದೇಶಕ ಡಾ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವರು. ಮಾಜಿ ಸಚಿವ ಎನ್.ಮಹೇಶ್ ಉಪಸ್ಥಿತರಿರುವರು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಬಿ.ಆರ್.ಮಹೇಶ್, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ, ನಗರಸಭೆ ಅಧ್ಯಕ್ಷ ಸುರೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಡಾ.ರೇಣುಕಾದೇವಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.