6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ

examination1625169207
Published on

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನ.6ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ.


ಜಿಲ್ಲೆಯ ಅಭ್ಯರ್ಥಿಗಳಿಗಾಗಿ 38 ಪರೀಕ್ಷಾ ಕೇಂದ್ರ ತೆರೆಯಲಾಗಿದ್ದು, 10,102 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪರೀಕ್ಷಾರ್ಥಿಗಳು ಯಾವುದೇ ತಾಂತ್ರಿಕ ಅಥವಾ ಬೆಲೆಬಾಳುವ ವಸ್ತು (ಮೊಬೈಲ್ ಹಾಗೂ ಇತರ ವಸ್ತುಗಳು) ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ.


ಈಗಾಗಲೇ ಪ್ರವೇಶ ಪತ್ರ ಕಳುಹಿಸಿಕೊಡಲಾಗಿದೆ. ಅದರಂತೆ ಅಭ್ಯರ್ಥಿಗಳು ತಮ್ಮ ಕೇಂದ್ರವನ್ನು ಮೊದಲೇ ಗುರುತಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ತನಿಖಾ ಜಾಗೃತ ದಳದ ಸದಸ್ಯರನ್ನು ನಿಯೋಜಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net