

ಹುಬ್ಬಳ್ಳಿ: ಗೋಲ್ಡ್ಮನ್ ಸಚ್ ಟ್ರೇಡಿಂಗ್ ಅಕೌಂಟ್‌ನಲ್ಲಿ ಹೂಡಿಕೆ ಮಾಡಿದರೆ ಮನೆಯಲ್ಲಿಯೇ ಕುಳಿತು ಹಣ ಗಳಿಸಬಹುದೆಂದು ನಂಬಿಸಿದ ಖದೀಮರು, ನಗರದ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 7.08 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ವಾಟ್ಸ್‌ಆ್ಯಪ್ ಮೂಲಕ ಪರಿಚಯವಾದ ಅಪರಿಚಿತರು, ನಂತರ ಗ್ರೂಪ್‌ಗೆ ಸೇರಿಸಿ ಗೋಲ್ಡ್ಮನ್ ಸಚ್ ಟ್ರೇಡಿಂಗ್ ಅಕೌಂಟ್‌ನಲ್ಲಿ ಹಣ ಹೂಡಿಕೆ ಮಾಡುವಂತೆ ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆಗೆ ಮೊದಲು ಒಂದಿಷ್ಟು ಲಾಭ ನೀಡಿ, ನಂತರ ಮಹಿಳೆಯ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.