7, 8ರಂದು ಸರ್ಕಾರಿ ನೌಕರರಿಗೆ ಕ್ರೀಡಾಕೂಟ

B.P. KRISHNEGOWDA
Published on

ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಏ.7 ಮತ್ತು 8ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದ ಒಳಗಡೆ ಹಾಗೂ ಹೊರಾಂಗಣ ಮೈದಾನದಲ್ಲಿ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಯೂತ್ ಹಾಸ್ಟಲ್‌ನ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಏ.7ರಂದು ಬೆಳಗ್ಗೆ 11 ಗಂಟೆಗೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಪ್ರಧಾನ ಮಂತ್ರಿ ಎಚ್ ಡಿ. ದೇವೇಗೌಡ ಉಪಸ್ಥಿತಿ ವಹಿಸಲಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕ ಕೆ.ಎಂ.ಶಿವಲಿಂಗೇಗೌಡ ಗೌರವ ಉಪಸ್ಥಿತಿ ವಹಿಸುವರು. ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್, ಶಾಸಕರಾದ ಎಚ್.ಡಿ. ರೇವಣ್ಣ, ಸಿ.ಎನ್. ಬಾಲಕೃಷ್ಣ, ಎ. ಮಂಜು, ಎಚ್.ಕೆ. ಸುರೇಶ್, ಸಿಮೆಂಟ್, ಸೂರಜ್ ರೇವಣ್ಣ, ಮಧು ಜಿ ಮಾದೇಗೌಡ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದರು.

ಅಂದು ಸಂಜೆ 6ಕ್ಕೆ ಅನುರಾಧಾ ಭಟ್ ಮತ್ತು ತಂಡದವರಿಂದ ವಿಶೇಷ ಸಂಗೀತ ಸಂಜೆ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈಗಾಗಲೇ 2200 ಮಂದಿ ಕ್ರೀಡಾಕೂಟದಲ್ಲಿ ಭಾಗವಹಿಸಲು ನೋಂದಾವಣೆ ಮಾಡಿಕೊಂಡಿದ್ದು ಸುಮಾರು 2500 ಮಂದಿ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕ್ರೀಡಾಕೂಟದಲ್ಲಿ ಶಟಲ್ ಬ್ಯಾಟ್ಮೆಂಟನ್, ಬಾಲ್ ಬ್ಯಾಡ್ಮಿಂಟನ್, ಕ್ರಿಕೆಟ್ , ಬ್ಯಾಸ್ಕೆಟ್ ಬಾಲ್, ಚೆಸ್, ಥ್ರೋ ಬಾಲ್, ಯೋಗ, ಕೋ ಕೋ ಸೆ ೀರಿದಂತೆ ಇತರೆ ಕ್ರೀಡೆಗಳು ಜರುಗಲಿವೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಒಒಡಿ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net