ಸೆಂಟ್ರಲ್ ಮಾರ್ಕೆಟ್ ಬಳಿ ಮಾದಕ ವಸ್ತು ಸೇವಿಸಿ ತೂರಾಡುತ್ತಾ ಸಾಗುತ್ತಿದ್ದ ಕುದ್ರೋಳಿ ನಿವಾಸಿ ಮೊಹಮ್ಮದ್ ಸಮಾದ್ ಅಲಿಯಾಸ್ ಅಬ್ದುಲ್ ಸಮಾದ್ ಅಲಿಯಾಸ್ ಚಮ್ಮು (50) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ಮ ಗ್ರಾಮದ ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಬಂಟ್ವಾಳ ಮಂಚಿಯ ಅಬೂಬಕ್ಕರ್ ಸಿದ್ದೀಕ್ (40) ಎಂಬಾತನನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಕುಂಟಿಕಾನ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅನುಮಾನಾಸ್ಪದವಾಗಿ ನಿಂತಿದ್ದ ಯೆಯ್ಯಾಡಿ ದಂಡಕೇರಿ ನಿವಾಸಿ ವೀಕ್ಷಿತ್ ಪೂಜಾರಿ (22) ಎಂಬಾತನನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಜಪೆ ಗ್ರಾಮದ ಶಾಂತಿಗುಡ್ಡೆ ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದ್ದ ಸುರತ್ಕಲ್ ಕಳವಾರು ನಿವಾಸಿ ಮೊಹಮ್ಮದ್ ಸಾಹಿಲ್ (22) ನನ್ನು ಬಜಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ಫಳ್ನೀರ್ ಬಳಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಪಂಪ್ ವೆಲ್ ಉಜ್ಜೋಡಿಯ ಅಮಲ್ (24)ನನ್ನು ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ್ದು, ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.