

ಮೈಸೂರು: ಜಿಲ್ಲೆಯಲ್ಲಿ 7 ಜನರಿಗೆ ಕರೊನಾ ತಗುಲಿರುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಒಳಾಂಗಣ ಕಾರ್ಯಕ್ರಮಗಳಲ್ಲಿ ಹಾಗೂ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸುವುದು, ತೀವ್ರ ಉಸಿರಾಟದ ಸಮಸ್ಯೆ, ಸೋಂಕು ಸಾಧ್ಯತೆಯುಳ್ಳ ರೋಗಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೇರೆ ಕಾಯಿಲೆ ಇರುವವರು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. 7ನೇ ಪ್ರಕರಣ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದವರಾಗಿದ್ದಾರೆ. ಈ ಪೈಕಿ ಈಗಾಗಲೇ ಒಬ್ಬರು ಗುಣಮುಖರಾಗಿದ್ದಾರೆ. ಎಲ್ಲರಿಗೂ ಯಾವುದೇ ಪ್ರಯಾಣ ದಾಖಲೆ (ಟ್ರಾವಲ್ ಹಿಸ್ಟರಿ) ಇಲ್ಲ. ಆದ್ದರಿಂದ ಆತಂಕಪಡುವ ಅಗತ್ಯ ಇಲ್ಲ.