ಉಡುಪಿಯಲ್ಲಿ 7 ಮಂದಿಗೆ ಪಾಸಿಟಿವ್

coronaaa
Published on

ಉಡುಪಿ: ಜಿಲ್ಲೆಯಲ್ಲಿ ಇತ್ತೀಚೆಗೆ ಮುಂಬೈನಿಂದ ಆಗಮಿಸಿದ್ದ 7 ಮಂದಿಯಲ್ಲಿ ಮಂಗಳವಾರ ಕರೊನಾ ಪಾಸಿಟಿವ್ ಪತ್ತೆಯಾಗಿದೆ.

ನಾಲ್ವರು ಪುರುಷರು, ಇಬ್ಬರು ಮಕ್ಕಳು, ಓರ್ವ ಮಹಿಳೆ ಸೋಂಕಿತರು. ಇವರಲ್ಲಿ ಐವರು ಉಡುಪಿಯವರು, ಇಬ್ಬರು ಕಾರ್ಕಳದವರು. ಸೋಂಕಿತರ ಮನೆಯನ್ನು ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಿ, ಸೀಲ್‌ಡೌನ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

147 ರೋಗಿಗಳು ಮಾತ್ರ: ಜಿಲ್ಲೆಯಲ್ಲಿ ಕೆಲದಿನಗಳಿಂದ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1035ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 992 ಮಂದಿ ಮಹಾರಾಷ್ಟ್ರದಿಂದ ಬಂದವರು.

ಈ ನಡುವೆ ಸಕ್ರಿಯ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮಂಗಳವಾರ 65 ಮಂದಿ ಸಹಿತ 885 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 147ಕ್ಕೆ ಇಳಿಕೆಯಾಗಿದೆ. ಎಲ್ಲರೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತಿದ್ದಾರೆ. ಒಬ್ಬ ವ್ಯಕ್ತಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net