‘ಚೆಕ್ಕೇರ ಕಪ್ ಕ್ರಿಕೆಟ್‌‘ 7 ತಂಡಗಳ ಮುನ್ನಡೆ

IMG-20250413-WA0060
7 teams advance in 'Chekkera Cup Cricket'
Published on

ಗೋಣಿಕೊಪ್ಪಲು: ಚೆಕ್ಕೇರ ಒಕ್ಕ, ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಹುದಿಕೇರಿ ಜನತಾ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ಚೆಕ್ಕೇರ ಕ್ರಿಕೆಟ್ ನಮ್ಮೆಯಲ್ಲಿ 7 ತಂಡಗಳು ಮುನ್ನಡೆ ಪಡೆದುಕೊಂಡಿವೆ.

ಚೇರಂಡ ಮತ್ತು ನೂರೇರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ನೂರೇರ ತಂಡ ನಿಗದಿತ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಚೇರಂಡ ತಂಡ ಎಲ್ಲ 6 ವಿಕೆಟ್ ಕಳೆದುಕೊಂಡು 48 ರನ್ ಗಳಿಸಲಷ್ಟೇ ಶಕ್ತವಾಯ್ತು.

ಮಾಳೆಯಂಡ ಮತ್ತು ಪುಗ್ಗೇರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೊದಲು ಬ್ಯಾಟ್ ಮಾಡಿದ ಪುಗ್ಗೇರ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿತು. ಮಾಳೆಯಂಡ ತಂಡ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.

ಚೆರುಮಂಡದ ಮತ್ತು ನಂಬಿಯಪಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಎರಡೂ ತಂಡಗಳುನ 63 ರನ್‌ಗಳಿಗೆ ಟೈ ಆದ ಕಾರಣ ಸೂಪರ್ ಓವರ್‌ನಲ್ಲಿ ಚೆರುಮಂದಂಡ ತಂಡ ಗೆಲುವು ಸಾಧಿಸಿತು.

ಮಿಣ್ಣಂಡ ಮತ್ತು ತೀತಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ತೀತಮಾಡ ತಂಡ ನಿಗದಿತ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 91 ರನ್ ಗಳಿಸಿತು. ಮಿಣ್ಣಂಡ ತಂಡ 5 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿತು.

ಬಾಚಿನಾಡಂಡ ಮತ್ತು ಮಾಣೀರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮಾಣೀರ ತಂಡ ನಿಗದಿತ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟವಿಲ್ಲದೆ 33 ರನ್ ಗಳಿಸಿತು. ಬಾಚಿನಾಡಂಡ ತಂಡ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಪಾರುವಂಗಡ ಮತ್ತು ಐಲಪಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಐಲಪಂಡ ತಂಡ ನಿಗದಿತ 6 ಓವರ್‌ಗಳಲ್ಲಿ 6ವಿಕೆಟ್ ನಷ್ಟಕ್ಕೆ 85 ರನ್ ಗಳಿಸಿತು. ಪರುವಂಗಡ ತಂಡ 4 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಲಷ್ಟೇ ಶಕ್ತವಾಯ್ತು.

ಪಟ್ರಪಂಡ ಮತ್ತು ಐಮುಡಿಯಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಐಲಪಂಡ ತಂಡ ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿತು. ಪಟ್ರಪಂಡ ತಂಡ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net