

ಸಿದ್ದಾಪುರ: ಮಾಲ್ದಾರೆ ಗ್ರಾಮದ ಮೊಲಗು ಮನೆ ಎಸ್ಟೇಟ್‌ನ ಕಾಫಿ ತೋಟದಲ್ಲಿ ಶುಕ್ರವಾರ 7 ಅಡಿ ಉದ್ದದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಕಳೆದ ಎರಡು ದಿನಗಳಿಂದ ತೋಟದಲ್ಲಿ ಹೆಬ್ಬಾವನ್ನು ಕಂಡು ಸ್ಥಳೀಯರು ಹಾಗೂ ಕಾರ್ಮಿಕರು ಆತಂಕಕ್ಕೀಡಾಗಿದ್ದರು. ಶುಕ್ರವಾರ ತೋಟಕ್ಕೆ ತೆರಳಿದ ಕಾರ್ಮಿಕರು ಚಾಮುಂಡೇಶ್ವರಿ ದೇವಸ್ಥಾನದ ಬಳಿ ಮಲಗಿದ್ದ ಹೆಬ್ಬಾವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ತಿತಿಮತಿ ಅರಣ್ಯ ಇಲಾಖೆ ಸಿಬ್ಬಂದಿ ಹೆಬ್ಬಾವನ್ನು ಸುರಕ್ಷಿತವಾಗಿ ಸೆರೆಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟರು.
ವಲಯ ಅರಣ್ಯ ಅಧಿಕಾರಿ ಶ್ರೀನಿವಾಸ್, ಸಿಬ್ಬಂದಿ ಗುರು, ಹರಿಪ್ರಸಾದ್, ಸಚಿನ್, ಧನು ಇತರರು ಇದ್ದರು.