

ಕೊಳ್ಳೇಗಾಲ: ಪಟ್ಟಣದ ಲಯನ್ಸ್ ಕ್ಲಬ್‌ನಲ್ಲಿ ಲಯನ್ಸ್ ಸಂಸ್ಥೆ ವತಿಯಿಂದ ಸೋಮವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರಕ್ಕೆ ಬೆಂಗಳೂರಿನ ವೆಸ್ಟ್ ಹೈ ಹಾಸ್ಪಿಟಲ್‌ನ ಡಾ.ಆಯುಷ್ ಚಾಲನೆ ನೀಡಿ ಮಾತನಾಡಿ, ಕಣ್ಣು ಅತ್ಯಮೂಲ್ಯ ಅಂಗ. ಕಣ್ಣಿನ ಭಾಗವನ್ನು ಅತಿಯಾಗಿ ಉಜ್ಜಬಾರದು. ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.
ಲಯನ್ಸ್ ಕಣ್ಣಿನ ಆಸ್ಪತ್ರೆಯ ಮ್ಯಾನೇಜಿಂಗ್ ಟ್ರಸ್ಟಿ ಚೆನ್ನಮಾದೇಗೌಡ ಮಾತನಾಡಿ, ಲಯನ್ಸ್ ಸಂಸ್ಥೆ ವತಿಯಿಂದ ಕೊಳ್ಳೇಗಾಲದಲ್ಲಿ ಈವರೆಗೂ 240 ಶಿಬಿರಗಳನ್ನು ನಡೆಸಲಾಗಿದೆ. ಹೊರರೋಗಿಗಳ ವಿಭಾಗದಲ್ಲಿ 1,09,000 ಸಾವಿರ ರೂ. ಜನರಿಗೆ ತಪಾಸಣೆ ಮಾಡಲಾಗಿದೆ. 10,812 ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.
ಶಿಬಿರದಲ್ಲಿ ತಪಾಸಣೆಗೆ ಒಳಪಟ್ಟ 70 ಜನರ ಪೈಕಿ 54 ಜನರು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಿ ಬೆಂಗಳೂರಿನ ಲಯನ್ಸ್ ವೆಸ್ಟ್ ಹೈ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಮಾದೇಶ್, ಕಾರ್ಯದರ್ಶಿ ವಿರೂಪಾಕ್ಷ ಸ್ವಾಮಿ, ಮಾಜಿ ಅಧ್ಯಕ್ಷ ನಾಗರಾಜು ಕೊಂಗರಹಳ್ಳಿ, ಸದಸ್ಯ ಚೇತನ್ ಮತ್ತಿತರಿದ್ದರು.