ಬುಧವಾರ 712 ಹೊಸ ಕೋವಿಡ್ ಪ್ರಕರಣ ಪತ್ತೆ : ಎರಡು ದಿನಗಳಲ್ಲಿ ಕೇವಲ 305 ಮಂದಿ ಗುಣಮುಖ

Covid Test
Published on

ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ 712 ಹೊಸ ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,71,204 ಏರಿಕೆಯಾಗಿದೆ. ಮತ್ತೊಂದೆಡೆ 174 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕಳೆದ ಎರಡು ದಿನಗಳಲ್ಲಿ 1,470 ಹೊಸ ಕರೊನಾ ಪ್ರಕರಣ ವರದಿಯಾದರೆ, ಕೇವಲ 305 ಮಂದಿ ಸೋಂಕು ಮುಕ್ತರಾಗಿದ್ದಾರೆ. ಈ ಮೂಲಕ ಒಟ್ಟು 3,48,653 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಒಂದು ವಾರದ ಹಿಂದೆ 14 ಸಾವಿರಕ್ಕಿಂತ ಕಡಿಮೆಯಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 18,394ಕ್ಕೆ ಏರಿಕೆಯಾಗಿದೆ.

ಈ ಪೈಕಿ 168 ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ 10 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 4,156 ಏರಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net