71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

ಕೆ.ಆರ್.ನಗರದ ಪಿಎಲ್‌ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿದರು. ಎಚ್.ವಿ.ರಾಜೀವ್, ಆರ್.ಚಲುವರಾಜು, ಎ.ಟಿ.ಸೋಮಶೇಖರ್, ಬಿ.ಎನ್.ಸದಾನಂದ ಇತರರು ಇದ್ದರು.
ಕೆ.ಆರ್.ನಗರದ ಪಿಎಲ್‌ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಶಾಸಕ ಡಿ.ರವಿಶಂಕರ್ ಉದ್ಘಾಟಿಸಿದರು. ಎಚ್.ವಿ.ರಾಜೀವ್, ಆರ್.ಚಲುವರಾಜು, ಎ.ಟಿ.ಸೋಮಶೇಖರ್, ಬಿ.ಎನ್.ಸದಾನಂದ ಇತರರು ಇದ್ದರು.
Published on

ಕೆ.ಆರ್.ನಗರ: ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಎಲ್ಲ ಕ್ಷೇತ್ರಗಳಲ್ಲಿಯೂ ಯಶಸ್ಸು ಸಾಧಿಸುವ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಗಬಹುದು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಪಿಎಲ್‌ಡಿ ಬ್ಯಾಂಕ್ ರೈತ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಕ್ಷೇತ್ರ ಪ್ರಗತಿ ಕಂಡರೆ ದೇಶದ ಆರ್ಥಿಕಾಭಿವೃದ್ಧಿ ನಾಗಾಲೋಟದಲ್ಲಿ ಸಾಗಲಿದ್ದು, ಇದನ್ನು ಅರಿತು ಸರ್ವರೂ ಮುನ್ನಡೆಯಬೇಕು ಎಂದರು.

ರೈತರು ಹೈನುಗಾರಿಕೆ ಮೇಲೆ ಹೆಚ್ಚು ಅವಲಂಬಿತಲಾಗಿದ್ದು, ಅವರಿಗೆ ಸರ್ಕಾರದಿಂದ ದೊರೆಯಬೇಕಾದ ಸವಲತ್ತುಗಳನ್ನು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಬೇಕು. ಇದರೊಂದಿಗೆ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರೈತ ಸದಸ್ಯರಿಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಸಹಕಾರ ಇಲಾಖೆ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಭವಿಷ್ಯದಲ್ಲಿ ಮತ್ತಷ್ಟು ಪರಿಮಾಣಕಾರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕು. ಜಿಲ್ಲಾ ಹಾಲು ಒಕ್ಕೂಟದ ಕಾರ್ಯವೈಖರಿಯನ್ನು ಮಾದರಿಯಾಗಿಟ್ಟುಕೊಂಡು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಡಾ.ಎಚ್.ವಿ.ರಾಜೀವ್ ಮಾತನಾಡಿ, ಗ್ರಾಮಾಂತರ ಪ್ರದೇಶದ ಆರ್ಥಿಕ ಚಟುವಟಿಕೆಗಳು ಸಹಕಾರ ಸಂಘದ ಮೇಲೆ ಅವಲಂಬಿತವಾಗಿದ್ದು, ಇದೊಂದು ಉತ್ತಮ ಬೆಳವಣಿಗೆ ಎಂದರು.

ಪ್ರತಿ ವರ್ಷ ಸಹಕಾರ ಸಪ್ತಾಹ ನಡೆಸಿ ಆ ಕ್ಷೇತ್ರವನ್ನು ಉತ್ತೇಜಿಸಿ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಸರ್ವರಿಗೂ ಸಹಕಾರ ಸಂಘಗಳು ಮತ್ತು ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.

ಮೈಮುಲ್ ಅಧ್ಯಕ್ಷ ಆರ್.ಚಲುವರಾಜು, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಬಿ.ಎನ್.ಸದಾನಂದ, ರಾಜ್ಯ ಮುಕ್ತ ವಿವಿಯ ಅರ್ಥಶಾಸ್ತ್ರ ಅಧ್ಯಯನ ವಿಭಾಗದ ಸಹಪ್ರಾಧ್ಯಾಪಕಿ ಡಾ.ಆರ್.ಎಚ್.ಪವಿತ್ರಾ, ಮೈಮುಲ್ ಮಾಜಿ ನಿರ್ದೇಶಕ ಎ.ಟಿ.ಸೋಮಶೇಖರ್ ಮಾತನಾಡಿದರು. ಹೊಸಹಳ್ಳಿ ಹಾಲು ಉತ್ಪಾಕದರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಎಂ.ಜೆ.ಗೀತಾ ಮಂಜುಗೌಡ, ಚಿಕ್ಕವಡ್ಡರಗುಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಂಗೇಗೌಡ ಸೇರಿದಂತೆ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಎಂ.ಮಲ್ಲಿಕಾರ್ಜುನ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ರಾಮೇಗೌಡ, ಮೈಮುಲ್ ನಿರ್ದೇಶಕಿ ಎ.ಬಿ.ಮಲ್ಲಿಕಾ ರವಿಕುಮಾರ್, ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ರವಿ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಎನ್.ದಿನೇಶ್ ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net