ಸತತ ಪರಿಶ್ರಮ, ತಾಳ್ಮೆಯಿಂದ ಯಶಸ್ಸು

13 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಯಾವುದೇ ಕ್ಷೇತ್ರದಲ್ಲಾದರೂ ಸತತ ಪರಿಶ್ರಮ, ತಾಳ್ಮೆ ಇದ್ದರೆ ಯಶಸ್ಸು ಸಾಧ್ಯ. ಕ್ರೀಡಾ ಕ್ಷೇತ್ರದಲ್ಲಂತೂ ಪ್ರತಿದಿನ ಅಭ್ಯಾಸ ಅತಿ ಅವಶ್ಯ. ಸೋಲುಂಟಾದಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಯಶಸ್ಸಿನ ಮೆಟ್ಟಿಲನ್ನಾಗಿ ಮಾಡಿಕೊಂಡು ಮುನ್ನಡೆಯಬೇಕು ಎಂದು ಅಂತಾರಾಷ್ಟ್ರೀಯ ಕುಸ್ತಿಪಟು ಅಂತಿಮ್ ಪಂಗಲ್ ಹೇಳಿದರು.

ಕರ್ನಾಟಕ ವಿಶ್ವವಿದ್ಯಾಲಯ ಹಾಗೂ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ 71ನೇ ಅಂತರ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರಿಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಗೆಲ್ಲಬೇಕಾದರೆ, ಹಲವಾರು ಬಾರಿ ಸೋಲು ಅನುಭವಿಸಬೇಕಾಗುತ್ತದೆ. ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಅ0ತಾರಾಷ್ಟ್ರೀಯ ಕುಸ್ತಿಪಟು ಮನೀಷಾ ಮಾತನಾಡಿ, ಕ್ರೀಡೆಗೆ ಭೇದಭಾವವಿಲ್ಲ. ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ಖಂಡಿತ ಸಾಧ್ಯ ಎಂದರು.

ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕವಿವಿ ಕುಲಪತಿ ಡಾ. ಬಿ.ಎಂ ಪಾಟೀಲ ಧ್ವಜಾರೋಹಣ ನೆರವೇರಿಸಿದರು.

ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಡಾ. ಕೆ. ಚನ್ನಪ್ಪ, ಮಹಾವೀರ ಉಪಾದ್ಯೆ, ಕೆ. ನಾಗಚಂದ್ರ, ಇತರರಿದ್ದರು.

ಜಿನ್ನಪ್ಪ ಕುಂದಗೋಳ ಸ್ವಾಗತಿಸಿದರು. ಶ್ರವಣ ಯೋಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net