72,609 ಪ್ರಕರಣಗಳು ಇತ್ಯರ್ಥ

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಲೋಕ ಅದಾಲತ್​ನಲ್ಲಿ ಒಟ್ಟು 72,609 ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಗಿದೆ.

ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇದ್ದ, ರಾಜಿ ಆಗಬಹುದಾದ 16,690 ಪ್ರಕರಣಗಳ ಪೈಕಿ 10,908 ಪ್ರಕರಣಗಳು, 63,760 ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 61,701 ಪ್ರಕರಣಗಳನ್ನು ಸೇರಿ ಒಟ್ಟು 72,609 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದ್ದ ವೈವಾಹಿಕ ಜೀವನಾಂಶ ಪ್ರಕರಣಗಳಲ್ಲಿ 16 ಪ್ರಕರಣಗಳು ಯಶಸ್ವಿಯಾಗಿ, ದಂಪತಿಗಳು ಒಂದಾಗಿದ್ದಾರೆ.

40 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ರಾಜಿ ಪ್ರಕರಣದ ಮೂಲಕ ತಮ್ಮ ವಿವಾದಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯ ನ್ಯಾಯಾಧೀಶರು, ನ್ಯಾಯವಾದಿಗಳು, ಬ್ಯಾಂಕ್​, ಸಹಕಾರಿ ಸಂಘ, ಹಣಕಾಸು ಸಂಸ್ಥೆ, ವಿಮಾ ಕಂಪನಿಗಳ ನ್ಯಾಯವಾದಿಗಳು, ಅಭಿಯೋಜನೆಯ ಅಧಿಕಾರಿಗಳು, ಪೊಲೀಸ್​ ಇಲಾಖೆ ಅಧಿಕಾರಿಗಳು, ಇತರರು ಇದ್ದರು ಎಂದು ಹಿರಿಯ ಸಿವಿಲ್​ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net