ಶಿಬಿರದಲ್ಲಿ 73 ಜನರಿಂದ ರಕ್ತದಾನ

ಶಿಬಿರದಲ್ಲಿ 73 ಜನರಿಂದ ರಕ್ತದಾನ
Published on

ಗೋಣಿಕೊಪ್ಪಲು: ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆ ಮಡಿಕೇರಿ ಹಾಗೂ ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಪೊನ್ನಂಪೇಟೆ ಇಗ್ಗುತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರದಲ್ಲಿ 73 ಜನ ರಕ್ತದಾನ ಮಾಡಿದರು.

ಈ ಸಂದರ್ಭ ಜಿಲ್ಲಾ ರಕ್ತ ನಿಧಿ ಕೇಂದ್ರದ ಅಧಿಕಾರಿ ಡಾ. ಕರುಂಬಯ್ಯ ಮಾತನಾಡಿ ಪ್ರತಿಯೊಬ್ಬರೂ ರಕ್ತದಾನದ ಮಹತ್ವವನ್ನು ಅರಿತು ಪ್ರತಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟು 65 ವಯಸ್ಸಿನವರೆಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ರಕ್ತದಾನದ ಬಗ್ಗೆ ಇರುವ ಮೂಢನಂಬಿಕೆಗಳನ್ನು ಬದಿಗಿಟ್ಟು ರಕ್ತದಾನ ಮಾಡುವುದರಿಂದ ರೋಗಿಗಳ ಜೀವ ಉಳಿಸಬಹುದು. ಇದರಿಂದ ರಕ್ತದಾನಿಗಳ ಆರೋಗ್ಯ ವೃದ್ಧಿಯಾಗುವುದರೊಂದಿಗೆ, ದೇಹದಲ್ಲಿನ ಕೊಬ್ಬಿನ ಅಂಶ ಕಡಿಮೆಯಾಗಿ ಹೃದಯ ಸಂಬಂಧಿ ಕಾಯಿಲೆಗಳಿಂದ ಮುಕ್ತರಾಗಬಹುದು. ಪ್ರತಿ ಸಂಘ ಸಂಸ್ಥೆಗಳು ವರ್ಷಕ್ಕೊಮ್ಮೆ ಇಂತಹ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು ಎಂದರು.

ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆ ಅಧ್ಯಕ್ಷ ಪಿ.ಪಿ.ಸುಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚೀರಂಡ ಚಂಗಪ್ಪ, ರಶೀದ್ ಕೊರೋತ್, ಮೈಕಲ್ ವೇಗಸ್ ಮಾತನಾಡಿದರು.

ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಶ್ರೀ ನಂದೀಶ್ವರ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಅಜ್ಜಿಕುಟ್ಟಿರ ಪೊನ್ನಪ್ಪ, ಉಪಾಧ್ಯಕ್ಷ ಚಮ್ಮಟಿರ ಶಾಂತ ಪೊನ್ನಪ್ಪ, ಕಾರ್ಯದರ್ಶಿ ಬಿ.ಎಸ್.ಸುರೇಶ್, ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆ ಉಪಾಧ್ಯಕ್ಷ ಅಶ್ರಫ್, ಅನಿಲ್ ಕುಮಾರ್, ಬಶೀರ್ ಆಲಿ, ಬಾಳೆಯಡ ದಿವ್ಯಾ ಮಂದಪ್ಪ, ಲೀಲಾವತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net