743 ಕೆಜಿ ಪಡಿತರ ಅಕ್ಕಿ ವಶ

26-KGL-4
ತಾಲೂಕಿನ ಪಾಳ್ಯ ಗ್ರಾಮದಲ್ಲಿ ಅಕ್ರಮ ಪಡಿತರವನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪಿಎಸ್‌ಐ ಸುಪ್ರೀತ್, ಆಹಾರ ನಿರೀಕ್ಷಕ ಪ್ರಸಾದ್ ವಶಕ್ಕೆ ಪಡೆದಿರುವುದು. ತಖೀವುಲ್ಲಾ, ಬಿಳಿಗೌಡ, ರವಿಕುಮಾರ್, ವೆಂಕಟೇಶ್ ಇದ್ದರು.
Published on

ಕೊಳ್ಳೇಗಾಲ : ತಾಲೂಕಿನ ಪಾಳ್ಯ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 743 ಕೆಜಿ ಪಡಿತರ ಅಕ್ಕಿಯನ್ನು ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ವಶಕ್ಕೆ ಪಡೆದಿದೆ.

ಪಾಳ್ಯ ಗ್ರಾಮದ ಸುಬ್ಬನಾಯಕ ಅವರ ಜಾಗದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಸುಪ್ರೀತ್ ಹಾಗೂ ಆಹಾರ ನಿರೀಕ್ಷಕ ಪ್ರಸಾದ್, ಉಪವಿಭಾಗ ಅಪರಾಧದ ಪತ್ತೆದಳ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಪರಾರಿಯಾಗಿದ್ದು, ದಾಸ್ತಾನು ಮಾಡಿದ್ದ ಅಕ್ಕಿ ಮೂಟೆಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪರಾರಿಯಾದ ಆರೋಪಿ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಮಧು ಕುಮಾರ್, ಡಿವೈಎಸ್ಪಿ ಅಪರಾಧ ಪತ್ತೆದಳದ ಎಎಸ್‌ಐ ತಖೀವುಲ್ಲಾ, ಹೆಡ್‌ಕಾನ್‌ಸ್ಟೆಬಲ್ ವೆಂಕಟೇಶ್, ರವಿಕುಮಾರ್, ಬಿಳಿಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net