ಇಳಕಲ್ಲದಲ್ಲಿ ಹಾರಾಡಲಿವೆ ೭೫೦೦ ರಾಷ್ಟ್ರಧ್ವಜ

ILAKALL RURAL 01
ಇಳಕಲ್ಲದ ಅಂಬೇಡ್ಕರ್ ಭವನದಲ್ಲಿ ನಗರಸಭೆ ವತಿಯಿಂದ ಸಾರ್ವಜನಿಕರಿಗೆ ರಾಷ್ಟ್ರಧ್ವಜವನ್ನು ಶಾಸಕ ದೊಡ್ಡನಗೌಡ ಪಾಟೀಲ ವಿತರಿಸಿದರು. ನಗರಸಭೆ ಅಧ್ಯಕ್ಷ ಮಂಜುನಾಥ ಶೆಟ್ಟರ, ಉಪಾಧ್ಯಕ್ಷ ಜಿ.ಎಚ್.ಗುಳೇದ, ಸ್ಥಾಯಿ ಸಮಿತಿ ಅಧ್ಯಕ್ಷ ಗಣೇಶ ಯರಡೋಣಿ ಇತರರಿದ್ದರು.
Published on

ಇಳಕಲ್ಲ (ಗ್ರಾ): ದೇಶಕ್ಕೆ ಸ್ವಾತಂತ್ರ‍್ಯ ದೊರೆತು ೭೫ ವರ್ಷವಾದ ಹಿನ್ನೆಲೆಯಲ್ಲಿ ರಾಷ್ಟ್ರದ್ಯಂತ ಅಮೃತ ಮಹೋತ್ಸವದ ಸಂಭ್ರಮ ಮನೆ ಮಾಡಿದೆ. ಕೇಂದ್ರ ಸರ್ಕಾರದ ಹರ ಘರ್ ತಿರಂಗಾ ಅಭಿಯಾನದಡಿ ಇಳಕಲ್ಲ ನಗರದಲ್ಲಿ ಮೂರು ದಿನ ರಾಷ್ಟ್ರಧ್ವಜಗಳ ಹಾರಾಟ ಜೋರಾಗಿ ನಡೆಯಲಿದೆ

ನಗರದ ೭೫೦೦ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಗರಸಭೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಧ್ವಜ ವಿತರಣೆ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದ ಅವರು, ಸ್ವಾತಂತ್ರ‍್ಯಕ್ಕಾಗಿ ಹೋರಾಟಗಾರರು ತ್ಯಾಗ, ಬಲಿದಾನ ಮಾಡಿದ್ದಾರೆ. ಅದರಲ್ಲಿ ವೀರ ಸಾರ್ವಕರ್ ಹೋರಾಟ ಪ್ರಮುಖವಾಗಿದೆ. ಅಂತಹ ಮಹನೀಯರಿಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net