

ಬೆಂಗಳೂರು: ಶ್ರೀಕೃಷ್ಣ ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಎಂ.ರುಕ್ಯಾಂಗದನಾಯ್ಡುರವರ 75ನೇ ವರ್ಷದ ಹುಟ್ಟು ಹಬ್ಬದ ಸಂಭ್ರಾಮಚರಣೆ ಹಾಗೂ ಡಾ.ಎಂ.ರುಕ್ಕಾಂಗದ ನಾಯ್ಡು ರವರ ಸಿದ್ದಿ ಸಾಧನೆಗೆ ಅಭಿನಂದನೆ ಸಮಾರಂಭವನ್ನು ಸ್ನೇಹಕೂಟ ಸಾಂಸ್ಕೃತಿಕ ವೇದಿಕೆಯು ನಗರದ ಜಿ.ಸಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ವಿದ್ಯಾವಾಚಾಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿಯವರು, ಶ್ರೀ ಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಬಿ.ಎಂ.ರುಕ್ಕಾಂಗದನಾಯ್ಡು ರವರನ್ನು ಅಭಿನಂದಿಸಿ, ಅಭಿನಂದನಾ ನುಡಿಗಳನ್ನಾಡಿದರು. ಶಿಕ್ಷಣ ತಜ್ಞ ಸಾಹಿತ್ಯ, ಸಂಸ್ಕೃತಿ ಪ್ರೇಮಿಯಾದ ಡಾ.ಎಂ.ರುಕ್ಕಾಂಗದನಾಯ್ಡು ರವರು ಮೂಲ ಆಂಧ್ರಪ್ರದೇಶದವರಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀ ಕೃಷ್ಣ ಸಮೂಹ ವಿದ್ಯಾ ಸಂಸ್ಥೆಯನ್ನು ನಿರ್ಮಿಸುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಉತ್ತಮ ವಾತಾವರಣವನ್ನು ನಿರ್ಮಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯನ್ನು ಮಾಡಿದ್ದಾರೆ ಎಂದರು.
75 ವಸಂತಗಳನ್ನು ಪೂರೈಸಿದ ಈ ಶುಭ ಸಂದರ್ಭದಲ್ಲಿ ಸುಮಾರು 5 ದಶಕಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಅಪೂರ್ವ ಕೊಡುಗೆ ಮುಂದಿನ ಪೀಳಿಗೆಗೆ ಮಾದರಿ ಎನಿಸಿದೆ ಎಂದರು. ಧಾರ್ಮಿಕ ಶ್ರದ್ದಾಳುವಾಗಿ ಶ್ರೀ ಕೃಷ್ಣನ ಅನನ್ಯ ಭಕ್ತರಾಗಿ ಸಂಸ್ಕೃತಿ, ಸಾಹಿತ್ಯಗಳ ಪೋಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಯುತರು ಸಿದ್ದಿಸಾಧನೆಗಳ ಕೂಡಲಸಂಗಮವಾಗಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಸ್ನೇಹ ಕೂಟ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಾ.ಆರ್.ವಾದಿರಾಜು ರವರು ತಮ್ಮ ಆಶಯ ನುಡಿಯಲ್ಲಿ ಎಂ.ನಾಯ್ಡುರವರ ಅಪಾರವಾದ ಕನ್ನಡ ಪ್ರೇಮ, ನಾಡು ನುಡಿಯ ಸೇವೆಗೆ ಕಂಕಣಬದ್ದವಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವ ಅಪರೂಪದ ಸಾಧಕ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೋಗ ಯೂನಿವರ್ಸಿಟಿ ಆಫ್ ದಿ ಅಮೆರಿಕಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ರಾಜಶೇಖರ ರೆಡ್ಡಿ ರವರು, ವಿದ್ಯಾವಾಚಾಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ರವರು. ಯೋಗ ವಿಶ್ವವಿದ್ಯಾಲಯದ ಉಪಾಧ್ಯಕ್ಷರಾದ ಡಾ.ಯೋಗಿ ದೇವರಾಜು ರವರು, ಶ್ರೀ ಕೃಷ್ಣ ಸಮೂಹ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜಲಜಮ್ಮ ಸ್ನೇಹ ಕೂಟ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಾ.ಆರ್.ವಾದಿರಾಜು, ಶೈಕ್ಷಣಿಕ ನಿರ್ದೆಶಕರಾದ ಪ್ರೊ.ಎಸ್.ಪಿ ಮನೋಹರ್, ಯೋಗ ವಿಶ್ವವಿದ್ಯಾಲಯದ ಕುಲಸಚಿವರಾದ ರವಿ ಪಿ.ಎಸ್ ಪಾಲ್ಗೊಂಡಿದ್ದರು.