ಸರ್ಕಾರಿ ನೌಕರರೆಂದು ಘೊಷಿಸಲು ಒತ್ತಾಯಿಸಿ ಪ್ರತಿಭಟನೆ

25-hvr-08
Published on

ಹಾವೇರಿ: ರಾಜ್ಯ ರಸ್ತೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೊಷಿಸುವಂತೆ ಒತ್ತಾಯಿಸಿ ನಗರದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ಕಚೇರಿ ಎದುರು ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಹಾಮಂಡಳದ ಆಶ್ರಯದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ನೌಕರರ ಮಹಾಮಂಡಳದ ಪ್ರಧಾನ ಕಾರ್ಯದರ್ಶಿ ಜಿ. ಪ್ರಕಾಶಮೂರ್ತಿ ಮಾತನಾಡಿ, ಪ್ರಯಾಣಿಕರಿಗೆ ತೊಂದರೆಯಾಗದಿರಲಿ ಎಂದು ಸಾಂಕೇತಿಕವಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ. ನೌಕರರು ಅನೇಕ ತೊಂದರೆಗಳ ಜತೆಗೆ ವೇತನ ತಾರತಮ್ಯ ಅನುಭವಿಸುತ್ತಿದ್ದಾರೆ. ಕೂಡಲೆ ಸರ್ಕಾರ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ವಿಭಾಗೀಯ ಸಾರಿಗೆ ಅಧಿಕಾರಿ ಎಸ್.ಎಸ್. ಮುಜುದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಹಾಮಂಡಳದ ಪದಾಧಿಕಾರಿಗಳಾದ ಎಂ.ಎಸ್. ಪವಾರ, ವಿ.ಬಿ. ಕುಲಕರ್ಣಿ, ಜೆ.ಆರ್. ಹಾವನೂರ, ಮಂಜುನಾಥ ಅಂಗಡಿ, ಗಿರೀಶ ಬಣಕಾರ, ಎಸ್.ಎಸ್. ಸೋಮನಾಳ, ಆರ್.ಎಚ್. ಕುಂಕುಮಗಾರ, ಕರಿಯಪ್ಪ ಸುಂಡಿ, ಜಿ.ಪಿ. ಚವಾಣ, ರಮೇಶ ಹಿರೇತನದ ಇತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net