ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸನ್ನದ್ದ

jlr
Published on

ಜಗಳೂರು: ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಸನ್ನದ್ದವಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪಿಐ ಶ್ರೀನಿವಾಸ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ 78ನೇ ಸ್ವಾತಂತ್ರೊೃೀತ್ಸವ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ, ಅತಿಯಾದ ವೇಗ, ಅಜಾಗರೂಕತೆ ಚಾಲನೆಯಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಪೊಲೀಸ್ ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಎಂದರು.

ರಸ್ತೆಯ ಇಕ್ಕೆಲಗಳಲ್ಲಿ ದ್ವಿಚಕ್ರ ಪಾಕಿರ್ಂಗ್ ಹೆಚ್ಚಾಗುತ್ತಿದ್ದು ಸಂಚಾರಕ್ಕೆ ಅಡಚಣೆಯಾಗುತ್ತಿದೆ. ನಿಯೋಜಿಸಿರುವ ಸಿಬ್ಬಂದಿ ನಿಮ್ಮ ಏರಿಯಾಗಳಲ್ಲಿ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ಪಟ್ಟಣದ ಚಳ್ಳಕೆರೆ ಗೇಟ್, ಎಂಜಿ ವೃತ್ತ ಮತ್ತು ಅಂಬೇಡ್ಕರ್ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಕಾನೂನು ಮೀರಿ ವಾಹನ ಚಾಲನೆ ಮಾಡುವ ಸವಾರರಿಗೆ ಹದ್ದಿನಕಣ್ಣಿಟ್ಟು ಕಾಯುತ್ತಿದ್ದೇವೆ. ನಿಯಮ ಉಲ್ಲಂಘಿಸಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.
ಪಿಎಸ್‌ಐಗಳಾದ ಮಂಜುನಾಥ್, ಆಶಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net