ತುಮಕೂರು ಜಿಲ್ಲಾಡಳಿತದಿಂದ ಆ.15ರಂದು 79ನೇ ಸ್ವಾತಂತ್ರ್ಯ ದಿನಾಚರಣೆ

DC_SP
Published on

ತುಮಕೂರು: 79ನೇ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತ ಸಜ್ಜಾಗಿದ್ದು ಸಿದ್ಧತೆ ಆರಂಭಿಸಿದೆ. ಆಗಸ್ಟ್​ 15ರ ಗುರುವಾರ ಬೆಳಗ್ಗೆ 9ಕ್ಕೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕೇಂದ್ರ ಸಚಿವ ವಿ.ಸೋಮಣ್ಣ ಉಪಸ್ಥಿತಿಯಲ್ಲಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ರಾಷ್ಟ್ರ ಧ್ವಜಾರೋಹಣ ಮಾಡಿ, ಗೌರವರಕ್ಷೆ ಸ್ವೀಕರಿಸುವರು.

ಸಹಕಾರ ಸಚಿವ ಕೆ.ಎನ್​.ರಾಜಣ್ಣ, ನವದೆಹಲಿ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್​.ಆರ್​.ಶ್ರೀನಿವಾಸ್​, ಶಾಸಕ ಜಿ.ಬಿ.ಜ್ಯೋತಿಗಣೇಶ್​ ಮತ್ತಿತರರು ಭಾಗವಹಿಸುವರು.

ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಸರ್ಕಾರಿ ಅಧಿಕಾರಿ, ನೌಕರರು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸ್ವಾತಂತ್ರೋತ್ಸವದ ಆಂಗವಾಗಿ ಅಂದು ಸಂಜೆ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಸಾಂಸತಿಕ ಕಾರ್ಯಕ್ರಮಗಳು ಜರುಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net