7ನೇ ವೇತನ ಆಯೋಗ ಜಾರಿಯಾಗಲಿ

9
ರಾಮದುರ್ಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರಿಗೆ ಮನವಿ ಸಲ್ಲಿಸಿದರು. ಐ.ವೈ.ಪವಾಡಿಗೌಡ್ರ, ಹುಸೇನ್ ಹೊಸಕೇರಿ ಇತರರಿದ್ದರು.
Published on

ರಾಮದುರ್ಗ: ರಾಜ್ಯ ಸರ್ಕಾರ 7ನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಾಲೂಕು ನೌಕರರ ಸಂಘದ ಪದಾಧಿಕಾರಿಗಳು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಮರುಜಾರಿಗೊಳಿಸಬೇಕು. ನೌಕರರ ಕುಟುಂಬದ ಆರೋಗ್ಯ ಕಾಪಾಡಬಲ್ಲ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಈಡೇರಿಕೆಗೆ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು. ನೌಕರರ ಸಂಘದ ತಾಲೂಕಾಧ್ಯಕ್ಷ ಐ.ವೈ.ಪವಾಡಿಗೌಡ್ರ, ಕಾರ್ಯದರ್ಶಿ ಹುಸೇನ್ ಹೊಸಕೇರಿ, ನೌಕರರ ಸಂಘದ ಪದಾಧಿಕಾರಿಗಳು ಹಾಗೂ ತಾಲೂಕಿನ ವಿವಿಧ ಇಲಾಖೆಯ ವೃಂದ ನೌಕರರ ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net