7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿ

Untitled design (3)
Published on

ರಾಯಚೂರು: ಏಳನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಸಕ ಡಾ.ಶಿವರಾಜ ಪಾಟೀಲ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಭಾನುವಾರ ಮನವಿ ಸಲ್ಲಿಸಿತು.


ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ಏಳನೇ ವೇತನ ಆಯೋಗದ ವರದಿ ಪಡೆಯಲಾಗಿತ್ತು. ಆದರೆ ಹೊಸ ಸರ್ಕಾರ ರಚನೆಯಾಗಿ ಏಳು ತಿಂಗಳಾದರೂ ವರದಿಯ ಶಿಫಾರಸು ಜಾರಿ ಮಾಡಿಲ್ಲ. ಕೂಡಲೇ ವರದಿಯ ಶಿಫಾರಸು ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಎನ್‌ಪಿಎಸ್ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು. ಸರ್ಕಾರಿ ನೌಕರರ ಮತ್ತು ಕುಟುಂಬದ ಸದಸ್ಯರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net