7ನೇ ವೇತನ ಆಯೋಗ ಜಾರಿಗೆ ಸರ್ಕಾರಕ್ಕೆ ಶಾಸಕರು ಒತ್ತಡ ತರುವಂತೆ ಮನವಿ

7ನೇ ವೇತನ ಆಯೋಗ ಜಾರಿಗೆ ಸರ್ಕಾರಕ್ಕೆ ಶಾಸಕರು ಒತ್ತಡ ತರುವಂತೆ ಮನವಿ
Published on

ಹಾಸನ: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ 7ನೇ ವೇತನ ಆಯೋಗವನ್ನು ಜಾರಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಗಮನಸೆಳೆಯುವಂತೆ ಒತ್ತಾಯಿಸಿ ಶಾಸಕ ಎಚ್.ಪಿ. ಸ್ವರೂಪ್ ಅವರಿಗೆ ಜಿಲ್ಲಾ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ತಾಲೂಕು ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಿ ಮಾತನಾಡಿದ
ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ , ಸರಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ಆದೇಶ ಹೊರಡಿಸುವುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದರು ಸರ್ಕಾರ ಮಾತ್ರ ಇದರ ಬಗ್ಗ ಕ್ರಮ ಕೈಗೊಳ್ಳುತ್ತಿಲ್ಲ ಆದ್ದರಿಂದ ಇತ್ತೀಚೆಗೆ ಚಿಕ್ಕಮಗಳೂರಲ್ಲಿ ನಮ್ಮ ಸಂಘದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಕಾರ್ಯಕಾರಿಣೀ ಸಭೆಯಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಅಂದಿನ ಕಾರ್ಯಕಾರಿ ಸಭೆಯಲ್ಲಿ ರಾಜ್ಯದ 31 ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲಾ ತಾಲೂಕಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಒಟ್ಟು 2,000ಕ್ಕೂ ಹೆಚ್ಚು ನೌಕರರು ಭಾಗವಹಿಸಿ, ಆ ಸಭೆಯಲ್ಲಿ ಒಮ್ಮತದಿಂದ 7ನೇ ವೇತನ ಆಯೋಗವನ್ನ ಜಾರಿ ಮಾಡುವಂತೆ ಒತ್ತಾಯಿಸಿದರು. ಈಗಾಗಲೇ ಸರ್ಕಾರ ಇದರ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ಜು 29ರವರೆಗೆ ಗಡುವು ನೀಡಲಾಗಿದ್ದು, ಅಷ್ಟರೊಳಗೆ ಜಾರಿ ಮಾಡದಿದ್ದರೆ, ಅನಿರ್ದಿಷ್ಟ ಅವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.
ಎರಡು ವರ್ಷಗಳಿಂದ ನಮ್ಮ ಬೇಡಿಕೆಯನ್ನ ಸಲ್ಲಿಸುತ್ತಲೇ ಬಂದಿದ್ದೇವೆ. ವೇತನ ಆಯೋಗದ ಕಮಿಟ್ಟಿ ರಚನೆಯಾಗಿ 1ವರ್ಷ 7ತಿಂಗಳಾಗಿದ್ದು ಇದುವರೆಗೂ ಕೂಡ ವರದಿಯನ್ನು ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದಲ್ಲದೆ ಎಂ ಪಿ ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲಾ ಶಾಸಕರಿಗೆ ಶುಕ್ರವಾರ ಜಿಲ್ಲಾ ಸಂಘ ಮತ್ತು ತಾಲೂಕು ಸಂಘಗಳಿಂದ ಮನವಿ ಸಲ್ಲಿಸಲಾಗಿದೆ. ಎಲ್ಲ ಶಾಸಕರು ನೌಕರರ ಪರವಾಗಿ ಮುಂಬರುವ ಅಧಿವೇಶನದಲ್ಲಿ ಧ್ವನಿಯೆತ್ತಿ ಸರ್ಕಾರದ ಗಮನಸಲ್ಲಿ ಇರಬೇಕು. ಈ ಹಿನ್ನೆಲೆಯಲ್ಲಿ ಹಾಸನ ಶಾಸಕರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು
ಈ ಸಂಧರ್ಭದಲ್ಲಿ ಕಸಾಪ ಮಾಜಿ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಸರಕಾರಿ ನೌಕರರ ಸಂಘದ ಮಂಜುನಾಥ್, ಕುಮಾರಸ್ವಾಮಿ, ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ಲಕ್ಷ್ಮೀ ಕಾಂತ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net