7ರಂದು ಗಿಡ ನೆಡುವ ಕಾರ್ಯಕ್ರಮ

Published on

ಚಾಮರಾಜನಗರ: ನೆಹರು ಯುವ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ಹಾಗೂ ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಂಯುಕ್ತಾಶ್ರಯದಲ್ಲಿ ತಾಯಿಯ ಹೆಸರಿನಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನ.7ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸುವರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸಭ್ಯಾಶ್ರೀ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸರ್ಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಂಶುಪಾಲ ಎಂ.ಸೋಮಣ್ಣ ಅಧ್ಯಕ್ಷತೆ ವಹಿಸುವರು. ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭೆ ಸದಸ್ಯ ಎಂ.ಮಹೇಶ್, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಅಧ್ಯಕ್ಷ ಜಿ.ಬಂಗಾರು, ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಚವರೆ, ಲೆಕ್ಕಾಧಿಕಾರಿ ಸತೀಶ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net