7ರಂದು ಸತ್ತೇಗಾಲದಲ್ಲಿ ನೂತನ ಶಾಲಾ ಕಟ್ಟಡ ಉದ್ಘಾಟನೆ

siddaramaiah
Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಲಕ್ಷ್ಮಮ್ಮ ಸೊಸಯ್ಯನ ಸಿದ್ದಯ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಬಿಕ್ಕು ಆನಂದ ಬಂತೇ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವರಾದ ಕೆ. ವೆಂಕಟೇಶ್, ಮಧು ಬಂಗಾರಪ್ಪ, ಡಾ. ಎಚ್.ಸಿ ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್, ಶಾಸಕರಾದ ಎಂ.ಆರ್. ಮಂಜುನಾಥ್, ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್‌ಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net