

ಹುಬ್ಬಳ್ಳಿ: ಜಿಎಫ್‌ಎಸ್‌ಎಲ್ನಲ್ಲಿ ಹೂಡಿಕೆ ಮಾಡಿ ಹಣ ಗಳಿಸಬಹುದೆಂದು ನಂಬಿಸಿದ ವಂಚಕರು, ನಗರದ ನಜಮುದ್ದೀನ್ ಎಂಬುವವರಿಂದ 8.27 ಲಕ್ಷ ರೂ. ವರ್ಗಾಯಿಸಿಕೊಂಡಿ ವಂಚಿಸಿದ್ದಾರೆ.
ವಾಟ್ಸ್ ಆ್ಯಪ್ ಮೂಲಕ ಸಂಪರ್ಕಿಸಿದ ಅಪರಿಚಿತರು, ಹೂಡಿಕೆ ಬಗ್ಗೆ ತಿಳಿಸಿದ್ದಾರೆ. ಮೊದಲು 66 ಸಾವಿರ ರೂ. ಲಾಭ ಕೊಟ್ಟು ನಂತರ 8,27,869 ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾರೆ ಎಂದು ಸಿಇಎನ್ ಕ್ರೈಂ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಲಾಗಿದೆ.