ಕಾಲೇಜು ಬ್ಯಾಂಕ್ ಖಾತೆಯಿಂದ 8.92 ಲಕ್ಷ ರೂ. ಎಗರಿಸಿದ ವಂಚಕರು!

Bank Fraud 27 JAN 20
Published on

ಬೆಂಗಳೂರು: ಸರ್ಕಾರಿ ಕಾಲೇಜು ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಯಿಂದ 8.92 ಲಕ್ಷ ರೂಪಾಯಿಯನ್ನು ಬೇರೊಂದು ಆನ್‌ಲೈನ್‌ನಲ್ಲಿ ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ನಡೆದಿದೆ.

ಬೆಂಗಳೂರಿನ ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಅಭಿವೃದ್ಧಿ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಈ ಪ್ರಕರಣ ನಡೆದಿದೆ. ಈ ಕುರಿತು ಕಾಲೇಜಿನ ಪ್ರಾಂಶುಪಾಲ ಡಾ.ವೈ. ವೆಂಕಟೇಶಪ್ಪ ಅವರು ಪಶ್ಚಿಮ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಆರ್​ಪಿಸಿ ಬಡಾವಣೆಯಲ್ಲಿರುವ ಬ್ಯಾಂಕ್ ಆಫ್​ ಇಂಡಿಯಾದಲ್ಲಿ ಖಾತೆ ತೆರೆಯಲಾಗಿದೆ. ಕಾಲೇಜು ಹಿರಿಯ ಅಧಿಕಾರಿಗಳ ಗಮನಕ್ಕೆ ಬಾರದೆ ಮೇ 12ರಿಂದ 30ರ ನಡುವೆ ಹಂತ ಹಂತವಾಗಿ 8.92 ಲಕ್ಷ ರೂಪಾಯಿಯನ್ನು ಅನಧಿಕೃತವಾಗಿ ಬೇರೊಂದು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net