ಕೋಲಾರದಲ್ಲಿ 8 ಮಂದಿ ಕರೊನಾಮುಕ್ತ

10-klr-18
Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಜಿಲ್ಲೆಯಲ್ಲಿ ಕರೊನಾ ಸೋಂಕಿಗೆ ತುತ್ತಾಗಿ ಎಸ್ಸೆನ್ನಾರ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಹಿಳೆ ಸೇರಿ 8 ಮಂದಿ ಗುಣಮುಖರಾಗಿ ಬುಧವಾರ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5ಕ್ಕೆ ಇಳಿದಿದೆ.

ಗುಣಮುಖರಾದವರಲ್ಲಿ ಕೋಲಾರ 3 ಮಂದಿ, ಮುಳಬಾಗಲು 2, ಮಾಲೂರು, ಕೆಜಿಎಫ್ ಹಾಗೂ ಬಂಗಾರಪೇಟೆಯಲ್ಲಿ ತಲಾ 1 ಸೇರಿದಂತೆ ಒಟ್ಟು 8 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

ಕೋಲಾರದ ಬೆಟ್ಟಹೊಸಪುರದ 22 ವರ್ಷದ ಗರ್ಭಿಣಿಗೆ ಮಂಗಳವಾರ ರಾತ್ರಿ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 31ಕ್ಕೆ ಏರಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 26ಕ್ಕೇರಿದೆ. ಇನ್ನು 5 ಸೋಂಕಿತರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅತಿ ಕಡಿಮೆ ಕರೊನಾ ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳ ಪೈಕಿ ಕೋಲಾರವೂ ಒಂದಾಗಿದೆ. ಬುಧವಾರ 77 ಮಾದರಿ ಸೇರಿ ಒಟ್ಟು 8321 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, 8028 ಮಾದರಿ ನೆಗೆಟಿವ್ ಬಂದಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net