

ಶಹಾಬಾದ್: ಸಂಪೂರ್ಣ ಹಾಳಾಗಿರುವ ವಾಡಿ ಕ್ರಾಸ್‌ನಿಂದ ಬಸವೇಶ್ವರ ವೃತ್ತದವರೆಗಿನ (ರಾಜ್ಯ ಹೆದ್ದಾರಿ-125) ರಸ್ತೆ ನಿರ್ಮಾಣಕ್ಕಾಗಿ 8 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸುವುದಾಗಿ ಶಾಸಕ ಬಸವರಾಜ ಮತ್ತಿಮಡು ತಿಳಿಸಿದ್ದಾರೆ.
ಶಹಾಬಾದ್ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ಹಾಳಾಗಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ್ದೇನೆ. ಜನರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಕಾಳಜಿ ವಹಿಸಿದ್ದು, ಮೂಲಸೌಕರ್ಯ ಕಲ್ಪಿಸುವುದು ನನ್ನ ಮುಖ್ಯ ಗುರಿ ಎಂದು ಹೇಳಿದ್ದಾರೆ.
ಈಗಾಗಲೇ ಹೊಸ ರಸ್ತೆ ನಿರ್ಮಾಣಕ್ಕಾಗಿ 8 ಕೋಟಿ ರೂ. ಮಂಜೂರಾಗಿದ್ದು, ನಾಲ್ಕೆÊದು ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು. ರಸ್ತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಂಡಿದ್ದು, ನಾನೇ ಮುಂದೆ ನಿಂತು ಗುಣಮಟ್ಟದ ಕೆಲಸದ ಬಗ್ಗೆ ನಿಗಾ ಇರಿಸುವುದಾಗಿ ತಿಳಿಸಿದ್ದಾರೆ.