80 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶ

16 LXR 1
: ಲಕ್ಷ್ಮೇಶ್ವರದ ವಿವಿಧೆಡೆ ಪುರಸಭೆ ಸಿಬ್ಬಂದಿ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಚೀಲ ವಶಪಡಿಸಿಕೊಂಡರು.
Published on

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಪುರಸಭೆ ಸಿಬ್ಬಂದಿ ವಿವಿಧ ಅಂಗಡಿಗಳ ಮೇಲೆ ಶುಕ್ರವಾರ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಚೀಲ ಸೇರಿ ವಿವಿಧ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದರು. ಪುರಸಭೆ ಸಿಬ್ಬಂದಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡರು. ಪುರಸಭೆಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ ಅವರ ನೇತೃತ್ವದಲ್ಲಿ ಪುರಸಭೆ ನಿವೃತ್ತ ನೌಕರ ಬಸವಣ್ಣೆಪ್ಪ ನಂದಣ್ಣವರ ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಸುಮಾರು 80 ಕೆಜಿ ಪ್ಲಾಸ್ಟಿಕ್ ವಶಕ್ಕೆ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net