80 ಮಕ್ಕಳಿಗೆ ಉಚಿತ ಶಿಕ್ಷಣ ಪ್ರಮಾಣ ಪತ್ರ ವಿತರಣೆ

Rampure School - Copy
????????????????????????????????????
Published on

ಬೀದರ್: ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿ.ಎಂ. ರಾಂಪುರೆ ಪಬ್ಲಿಕ್ ಶಾಲೆಯ ವತಿಯಿಂದ ಗ್ರಾಮೀಣ ಪ್ರದೇಶದ 80 ಮಕ್ಕಳಿಗೆ ಉಚಿತ ಶಿಕ್ಷಣ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಸ್ತುತ ಪ್ರಾಥಮಿಕ ಶಿಕ್ಷಣವೂ ದುಬಾರಿಯಾಗಿದೆ. ಅಂತಹದ್ದರಲ್ಲಿ ರಾಂಪುರೆ ಶಾಲೆ ಅಧ್ಯಕ್ಷ ಮಹೇಶ ಎಸ್. ರಾಂಪುರೆ ಅವರು 80 ಮಕ್ಕಳಿಗೆ ಉಚಿತ ಶಿಕ್ಷಣ ಕೊಡಲು ಮುಂದಾಗಿರುವುದು ಶ್ಲಾಘನೀಯ ಎಂದು ಸಾನಿಧ್ಯ ವಹಿಸಿದ್ದ ಕೌಠಾ ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ನುಡಿದರು.
ಜ್ಞಾನ ದಾಸೋಹ ಕಾರ್ಯ ಶ್ರೇಷ್ಠವಾದದ್ದು ಎಂದು ಸಾಹಿತಿ ಮಹಾಂತೇಶ ಕಲಬುರಗಿ ಹೇಳಿದರು.
ಸರ್ಕಾರದಿಂದ ಯಾವುದೇ ಅನುದಾನ ಪಡೆಯದೆ, ಅನೇಕ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುತ್ತಿರುವ ಶಾಲೆಯ ಕಾರ್ಯ ಮಾದರಿಯಾಗಿದೆ ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ತಿಳಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರೇಮಸಾಗರ ದಾಂಡೇಕರ್, ನಗರಸಭೆ ಆಯುಕ್ತ ಪ್ರಬುದ್ಧ ಕಾಂಬಳೆ, ಎಇಇ ರಾಜಶೇಖರ ಮಠ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಬೆಳಮಗಿ, ಸಾಹಿತಿ ಸುಬ್ಬಣ್ಣ ಕರಕನಳ್ಳಿ, ವಿಜಯಕುಮಾರ ಪಾಟೀಲ ಮಾತನಾಡಿದರು.
ಮಕ್ಕಳಿಂದ ನಡೆದ ದೇಶಭಕ್ತಿ ಗೀತೆ, ನೃತ್ಯ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮಗಳು ಸಭಿಕರ ಗಮನ ಸೆಳೆದವು.
ಆಣದೂರಿನ ಭಂತೆ ಜ್ಞಾನಸಾಗರ ಸಾನಿಧ್ಯ ವಹಿಸಿದ್ದರು. ವಿ.ಎಂ. ರಾಂಪುರೆ ಶಾಲೆಯ ಸಂಸ್ಥಾಪಕಿ ಶಾರದಾಬಾಯಿ ರಾಂಪುರೆ ಅಧ್ಯಕ್ಷತೆ ವಹಿಸಿದ್ದರು. ಸಿಆರ್‍ಪಿ ಮಾಣಿಕರಾವ್ ಪವಾರ್ ಉಪಸ್ಥಿತರಿದ್ದರು. ರಾಂಪುರೆ ಗ್ರುಪ್ ಆಫ್ ಇನ್‍ಸ್ಟಿಟ್ಯೂಷನ್ಸ್ ಅಧ್ಯಕ್ಷ ಮಹೇಶ ಎಸ್. ರಾಂಪುರೆ ಸ್ವಾಗತಿಸಿದರು. ಚನ್ನಬಸವ ಹೇಡೆ ನಿರೂಪಿಸಿದರು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ವಿ.ಎಂ. ರಾಂಪುರೆ ಪಬ್ಲಿಕ್ ಸ್ಕೂಲ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net