81.83 ಕೋಟಿ ರೂ. ವಂಚನೆ!

18Manju3
ಗೋಕಾಕ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ಗೆ ಪೊಲೀಸ್ ಭದ್ರತೆ ನೀಡಿರುವುದು.
Published on

81.83 Crore Rs. Fraud Belagavi

ಗೋಕಾಕ: ಇಲ್ಲಿನ ಗುರುವಾರ ಪೇಟೆಯಲ್ಲಿರುವ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ 81.83 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ದೂರು ದಾಖಲಾಗಿದೆ. ಗೋಕಾಕ ನಗರದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ 14 ಆರೋಪಿಗಳು 6.97 ಕೋಟಿ ರೂ. ಠೇವಣಿ ಮಾಡಿದ್ದಾರೆ. ಈ ಠೇವಣಿ ಹಣದ ಮೇಲೆ 2021ರಿಂದ 2024 ನಡುವಿನ ಅವಧಿಯಲ್ಲಿ 81.83 ಕೋಟಿ ರೂ. ಸಾಲ ಪಡೆದುಕೊಂಡಿದ್ದಾರೆ. ಆದರೆ, ಇಲ್ಲಿಯವರೆಗೆ ಪಡೆದ ಸಾಲ ಮರುಪಾವತಿಸದೆ ವಂಚಿಸಿದ್ದಾರೆ ಎಂದು ಜಿತೇಂದ್ರ ಮಾಂಗಳೇಕರ್ ದೂರು ದಾಖಲಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬ್ಯಾಂಕ್‌ಗೆ ಪೊಲೀಸ್ ಭದ್ರತೆ ನೀಡಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net