84.6 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ, ಇಬ್ಬರ ಬಂಧನ

ganja
Published on

ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತರಿಸಿಕೊಂಡು‌ ಬೆಂಗಳೂರು ನಗರದ ವಿವಿಧೆಡೆ ಮಾರಾಟ‌ ಮಾಡುತ್ತಿದ್ದ ಇಬ್ಬರು ದುಷ್ಕರ್ಮಿಗಳನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 84.60 ಲಕ್ಷ ರೂ. ಮೌಲ್ಯದ 141 ಕೆ.ಜಿ. ಗಾಂಜಾ, ತೂಕದ ಯಂತ್ರ ಮತ್ತು ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.

ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22) ಹಾಗೂ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಮೂರ್ತಿ (40) ಬಂಧಿತರು. ಕೋರಮಂಗಲದ ಬಳ್ಳಾರಿ ಕಾಲೊನಿ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ಮುಂದಾಗಿದ್ದರು. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಆರೋಪಿಗಳು ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಅರಕು ಗುಡ್ಡಗಾಡು ಪ್ರದೇಶದ ಆದಿವಾಸಿಗಳಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದರು. ಇದನ್ನು ನಗರಕ್ಕೆ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net