

ಬೆಳಗಾವಿ : ನಿರಂತರ ಮಳೆಯಿಂದಾಗಿ ಖಾನಾಪುರ ತಾಲೂಕಿನಲ್ಲಿ 87 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ನಾಲ್ಕು ಮನೆಗಳು ಸಂಪೂರ್ಣವಾಗಿ ಕುಸಿದಿವೆ. ಮಳೆಯ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹಾನಿಯ ಪ್ರಮಾಣ ಕೂಡ ಹೆಚ್ಚಾಗಬಹುದು. ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿರುತ್ತದೆ. ವೇದಗಂಗಾ-ದೂಧಗಂಗಾ ಸೇರಿದಂತೆ ಎಲ್ಲ ನದಿಗಳ ಒಳಹರಿವು ಪ್ರಮಾಣದ ಮೇಲೆ ನಿಗಾವಹಿಸಲಾಗಿದೆ. ಆಲಮಟ್ಟಿ ಜಲಾಶಯ ಭರ್ತಿಯಾದ ಬಳಿಕ ಒಳ ಹರಿವು ಆಧರಿಸಿ ಅದೇ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಭೂರಣಕಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು, ಗ್ರಾಮಸ್ಥರ ಅಹವಾಲು ಕೇಳಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು