

ಚಿತ್ರದುರ್ಗ: ದಾವಣಗೆರೆ ವಿವಿ 2022-23ನೇ ಸಾಲಿನ ಅಂತಿಮ ವರ್ಷದ ಬಿ.ಎ., ಬಿ.ಕಾಂ.ಪರೀಕ್ಷೆಗಳಲ್ಲಿ ನಗರದ ಎಸ್‌ಜೆಎಂ ಕಲಾ ವಾಣಿಜ್ಯ ಮಹಾವಿದ್ಯಾಲಯದ ಬಿಎ ವಿದ್ಯಾರ್ಥಿನಿ ಪಿ.ಸಂಗೀತಾ ಶೇ.90, ಪಿ.ಪ್ರಶಾಂತಿನಿ ಶೇ.88 ಹಾಗೂ ವಾಣಿಜ್ಯ ವಿಭಾಗದ ಅಬ್ದುಲ್ ಅಜೀಜ್ ಶೇ.92.1, ಆರ್.ನೇತ್ರಾ ಶೇ.91 ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದಿದ್ದಾರೆ.
’ ವಿಷಯದಲ್ಲಿ ಈ ನಾಲ್ವರು ವಿದ್ಯಾರ್ಥಿಗಳು ಶೇ.100 ಅಂಕಗಳನ್ನು ಪಡೆದಿದ್ದಾರೆ. ಕಾಲೇಜಿಗೆ ಬಿಎ ಪದವಿಯಲ್ಲಿ ಶೇ.88.68 ಹಾಗೂ ಬಿಕಾಂನಲ್ಲಿ ಶೇ.100 ಫಲಿತಾಂಶ ಬಂದಿದೆ.
ಅತಿ ಹೆಚ್ಚು ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳಿಸಿದ ವಿದ್ಯಾರ್ಥಿಗಳ ಸಾಧನೆಗೆ ಎಸ್‌ಜೆಎಂ ವಿದ್ಯಾಪೀಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ, ಆಡಳಿತಾಧಿಕಾರಿ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ರೇಖಾ, ಕಾಲೇಜಿನ ಪ್ರಾಂಶುಪಾಲ ಡಾ.ಎಲ್.ಈಶ್ವರಪ್ಪ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.