ಶ್ರೀ ಬಸವೇಶ್ವರರ 892ನೇ ಜಯಂತ್ಯುತ್ಸವ

Siddheshwar organization expresses anger against Mushrif
Shivasharane Hemaraddi Mallamma Jayanti
Published on

ವಿಜಯಪುರ : ನಗರದ ಹೊರ ವಲಯದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ಭವನದಲ್ಲಿ ಏ. 30 ರಂದು ಬೆಳಗ್ಗೆ 10ಕ್ಕೆ ಸಾಂಸತಿಕ ನಾಯಕ, ವಿಶ್ವಗುರು ಶ್ರೀ ಬಸವೇಶ್ವರರ 892ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಲಿದೆ. ಮಹಿಳಾ ವಿವಿಯ ಬಸವೇಶ್ವರ ಅಧ್ಯಯನ ಪೀಠದ ಸಹಯೋಗದಲ್ಲಿ ಜಯಂತಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ, ಸಿಂಡಿಕೇಟ್​ ಸದಸ್ಯ ಡಾ. ಎಸ್​. ನಟರಾಜ ಬೂದಾಳು ಭಾಗವಹಿಸುವರು. ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಅಧ್ಯಕ್ಷತೆ ವಹಿಸುವರು.

ಕುಲಸಚಿವ ಶಂಕರಗೌಡ ಸೋಮನಾಳ ಮತ್ತು ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್​.ಎಂ. ಚಂದ್ರಶೇಖರ, ಇತರರು ಭಾಗವಹಿಸಲಿದ್ದಾರೆ ಎಂದು ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಪ್ರೊ. ರಾಜಕುಮಾರ ಮಾಲೀಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net