

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್‌ಸಿಆರ್‌ಟಿಸಿ) ನಡೆಸಿದ ರಾಷ್ಟ್ರಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ 8ನೇ ರ‌್ಯಾಂಕ್ ಹಾಗೂ ರಾಜ್ಯಮಟ್ಟದಲ್ಲಿ 2ನೇ ರ‌್ಯಾಂಕ್ ಗಳಿಸುವ ಮೂಲಕ ಮತ್ತೊಮ್ಮೆ ಎಕ್ಸೆಲ್‌ನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಮಿಂಚುವಂತಾಗಿದೆ. ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.