

ಚಾಮರಾಜನಗರ: ಸುಶಿಕ್ಷಿತ ಭಾರತ ನಿರ್ಮಾಣದ ಗುರಿಯೊಂದಿಗೆ ಸಮರ್ಪಣ ೌಂಡೇಷನ್ ವತಿಯಿಂದ ಯಳಂದೂರಿನಲ್ಲಿ ೆ.8ರಂದು ನಾನು ಐಎಎಸ್ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ೌಂಡೇಷನ್ ಅಧ್ಯಕ್ಷ ಎಂ.ಎನ್.ರಾಜು ಅಗರ ತಿಳಿಸಿದರು.
ಯಳಂದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾಗುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸುವರು. ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಅಧ್ಯಕ್ಷತೆವಹಿಸುವರು. ಸಾಧನ ಅಕಾಡೆಮಿ ಸಂಸ್ಥಾಪಕ ಬಿ.ಮಂಜುನಾಥ್ ವಿಶೇಷ ಉಪನ್ಯಾಸ ನೀಡುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚಾಮುಲ್ ನಿರ್ಗಮಿತ ಅಧ್ಯಕ್ಷ ನಾಗೇಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಬಾಲಸುಬ್ರಮಣ್ಯಂ, ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ವಿಜಯ್, ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ಎಸ್.ಚಂದ್ರಶೇಖರ್, ಚಾಮರಾಜನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಗೋವಿಂದರಾಜು ಭಾಗವಹಿಸುವರು ಎಂದು ವಿವರಿಸಿದರು.
ಕಾರ್ಯಾಗಾರದಲ್ಲಿ ಖೋ-ಖೋ ವಿಶ್ವಕಪ್ ಆಟಗಾರ್ತಿ ಚೈತ್ರಾ ಮತ್ತು ತರಬೇತುದಾರ ಮಂಜುನಾಥ್ ಅವರನ್ನು ಸನ್ಮಾನಿಸಲಾಗುವುದು. ಸಮರ್ಪಣ ೌಂಡೇಷನ್ ವತಿಯಿಂದ ಕಣ್ಣಿನ ತಪಾಸಣಾ ಶಿಬಿರ, ವಿಚಾರ ಸಂಕಿರಣ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಗಾರಗಳನ್ನ ಮಾಡುತ್ತಿದ್ದೇವೆ. ಐಎಎಸ್ ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಿಗಲೆಂದು ಈ ಕಾರ್ಯಾಗಾರ ಮಾಡುತ್ತಿದ್ದೇವೆ ಎಂದರು. ಗೋಷ್ಠಿಯಲ್ಲಿ ಸುರೇಶ್, ಶ್ರೀನಿವಾಸ, ಮಹೇಶ್, ದಿಲೀಪ್, ಚೇತನ್ ಇದ್ದರು.