90 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ

mng--17 march Gold
Published on

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಾ.1ರಿಂದ 15ರವರೆಗೆ ಅಕ್ರಮವಾಗಿ 90 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ ಮಾಡಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.


ಮೂವರು ಪ್ರಯಾಣಿಕರಿಂದ 90,67,750 ರೂ. ವೌಲ್ಯದ 1606 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಚಿನ್ನವನ್ನು ವಿವಿಧ ವಿಧಾನಗಳಲ್ಲಿ ಪೇಸ್ಟ್ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಪ್ರಕರಣವೊಂದರಲ್ಲಿ 21 ತಿಂಗಳ ಮಗುವಿನ ಡೈಪರ್‌ನಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಒಟ್ಟು ಮೂರು ಪ್ರಕರಣ ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net