

ಕೊಳ್ಳೇಗಾಲ: ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಳ್ಳೇಗಾಲ ತಾಲೂಕಿನಲ್ಲಿ ಶಾಂತಿಯುತವಾಗಿ ಶೇ.91.02ರಷ್ಟು ಮತದಾನ ನಡೆದಿದೆ.
ಪಟ್ಟಣದ ತಾಲೂಕು ಕಚೇರಿಯಲ್ಲಿ ತೆರೆಯಲಾಗಿದ್ದ ಮತಗಟ್ಟೆ ಸಂಖ್ಯೆ4ರಲ್ಲಿ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಪ್ರಕಿಯೆ ನಡೆಯಿತು. ಮತಗಟ್ಟೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಕೊಳ್ಳೇಗಾಲ ತಾಲೂಕಿನಲ್ಲಿ ಒಟ್ಟು 724 ಮತಗಳಿದ್ದು, ಈ ಪೈಕಿ 659 ಜನರು ಮತ ಚಲಾಯಿಸಿದ್ದಾರೆ. ಇದರಲ್ಲಿ 379 ಪರುಷ ಹಾಗೂ 280 ಮಹಿಳೆಯರು ಮತದಾನ ಮಾಡಿದರು.
ತಾಲೂಕು ಕಚೇರಿ ಮತಗಟ್ಟೆ ಕೇಂದ್ರದಿಂದ ನೂರು ಮೀಟರ್ ದೂರ ಮುಖ್ಯ ರಸ್ತೆ ಬದಿಯಲ್ಲಿ ವಿವಿಧ ಪಕ್ಷದ ಮುಖಂಡರು ಮತಯಾಚನೆ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ ಶಾಸಕ ಎ.ಆರ್.ಕೃಷ್ಣಮೂರ್ತಿ, ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಎಸ್.ಜಯಣ್ಣ, ಕಾಡಾ ನಿಗಮ ಅಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಅಧ್ಯಕ್ಷ ತೋಟೇಶ್ ಮತಯಾಚನೆ ಮಾಡಿದರು. ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಮತ ನೀಡುವಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಶಾಸಕ ಎಸ್.ಬಾಲರಾಜು, ಡಾ.ದತ್ತೇಶ್ ಕುಮಾರ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಎನ್.ವಿ.ಪರಮೇಶ್ವರಯ್ಯ ಮನವಿ ಮಾಡಿದರು. ಬಿಎಸ್ಪಿ ಅಭ್ಯರ್ಥಿ ಹ.ರಾ.ಮಹೇಶ್ ಪರ ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಮತಯಾಚಿಸಿದರು.