93 ಜನರಿಂದ ರಕ್ತದಾನ

5Imam8-Web
ಬೆಳಗಾವಿ ನಗರದ ಸಂತಮೀರಾ ಪ್ರೌಢಶಾಲೆಯಲ್ಲಿ ಹಿಂದುಪರ ಸಂಘಟನೆಗಳಿಂದ ಬುಧವಾರ ಹಮ್ಮಿಕೊಂಡಿದ್ದ ಶಿಬಿರದಲ್ಲಿ ರಕ್ತದಾನ ಮಾಡಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕೃಷ್ಣ ಭಟ್, ವಿಜಯ ಜಾಧವ, ಹೇಮಂತ ಹವಳ, ಬಾವಕಣ್ಣ ಲೋಹಾರ, ಆದಿನಾಥ ಗಾವಡೆ, ಸುನೀಲ ಕಣೇರಿ ಇತರರು ಇದ್ದರು.
Published on

ಬೆಳಗಾವಿ: ನಗರದ ಸಂತಮೀರಾ ಪ್ರೌಢಶಾಲೆಯಲ್ಲಿ ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳ ಆಶ್ರಯದಲ್ಲಿ ಬುಧವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ವಿಶ್ವ ಹಿಂದು ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ ಕದಂ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಅಭಾವ ಸೃಷ್ಟಿಯಾಗಬಾರದು ಎಂಬ ಉದ್ದೇಶದಿಂದ ಶಿಬಿರ ಆಯೋಜಿಸಿದ್ದೇವೆ. 93 ಜನರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ್ದಾರೆ ಎಂದರು. ಕೃಷ್ಣ ಭಟ್, ವಿಜಯ ಜಾಧವ, ಹೇಮಂತ ಹವಳ, ಬಾವಕಣ್ಣ ಲೋಹಾರ, ಆದಿನಾಥ ಗಾವಡೆ, ಸುನೀಲ ಕಣೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net