ಶೇ.95ರಷ್ಟು ಜನರಿಗೆ ಗ್ಯಾರಂಟಿ ಯೋಜನೆ ಲಾಭ

19ldh2
ಸರ್ಕಾರದ ಗ್ಯಾರಂಟಿ ಯೋಜನೆಗಳ ತರೀಕೆರೆ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ತಣಿಗೆಬೈಲು ರಮೇಶ್ ಗೋವಿಂದೇಗೌಡ ಅವರನ್ನು ಸನ್ಮಾನಿಸಲಾಯಿತು. ಶ್ರೀದೇವಿ ಸತೀಶ್, ಮಹಮ್ಮದ್ ಅಕ್ಬರ್, ಎನ್.ಎಸ್.ಹನುಮಂತಪ್ಪ ಇದ್ದರು.
Published on

ಲಿಂಗದಹಳ್ಳಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿಗಳ ಸಮರ್ಪಕ ಜಾರಿಗೆ ರಚಿಸಿರುವ ಸಮಿತಿಯ ತರೀಕೆರೆ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾಗಿ ರಮೇಶ್ ಗೋವಿಂದೇಗೌಡ ಅವರನ್ನು ಆಯ್ಕೆಮಾಡಲಾಗಿದೆ.
ಜೈಪುರ ಗ್ರಾಮಸ್ಥರು ಆಯೋಜಿಸಿದ್ದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಮೇಶ್ ಗೋವಿಂದೇಗೌಡ, ತರೀಕೆರೆ ಕ್ಷೇತ್ರಾದಾದ್ಯಂತ ಶೇ.95ರಷ್ಟು ಲಾನುಭವಿಗಳಿಗೆ ವಿವಿಧ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿದೆ. ಬಾಕಿ ಉಳಿದ ಶೇ.5 ರಷ್ಟು ಮಂದಿಗೆ ವಿವಿಧ ತಾಂತ್ರಿಕ ಕಾರಣಗಳಿಂದ ಅಡಚಣೆ ಉಂಟಾಗಿದೆ. ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಗ್ಯಾರಂಟಿ ಯೋಜನೆಗಳು ಶೇ.100 ಗಡಿ ತಲುಪುವಂತೆ ಅಗತ್ಯ ಕ್ರಮಕೈಗೊಂಡು ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು. ತಿಗಡ ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಸತೀಶ್, ಬಗರ್ ಹುಕುಂ ಸಮಿತಿ ಸದಸ್ಯರಾದ ಮಹಮ್ಮದ್ ಅಕ್ಬರ್, ಗ್ರಾಮಸ್ಥರಾದ ಬಾಬಾಜೀ, ಕುಮಾರ್, ಹನುಮಂತಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net