

ಮುಂಡರಗಿ: ಮಲೆನಾಡಿನ ವಿವಿಧೆಡೆ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಗೆ ಹೆಚ್ಚು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹೀಗಾಗಿ ತಾಲೂಕಿನ ಹಮ್ಮಿಗಿ ಸಮೀಪದ ಸಿಂಗಟಾಲೂರು ಬ್ಯಾರೇಜ್‌ನ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
ಬ್ಯಾರೇಜ್‌ನ 26 ಗೇಟ್‌ಗಳ ಪೈಕಿ 17 ಗೇಟ್‌ಗಳ ಮೂಲಕ ಗುರುವಾರ 96,056 ಕ್ಯೂಸೆಕ್ ನೀರನ್ನು ತುಂಗಭದ್ರಾ ನದಿಗೆ ಹರಿಬಿಡಲಾಗಿದೆ. ಬುಧವಾರ 88,958 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿತ್ತು. ಹೀಗಾಗಿ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿಸಿದೆ.