ಉಡುಪಿಯಲ್ಲಿ 98 ಪಾಸಿಟಿವ್

covid test
Published on

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 98 ಮಂದಿಗೆ ಕರೊನಾ ಪಾಸಿಟಿವ್ ವರದಿಯಾಗಿದೆ.

ಉಡುಪಿ 56, ಕುಂದಾಪುರ 36, ಕಾರ್ಕಳ 6 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರಲ್ಲಿ 53 ಪುರುಷರು, 36 ಮಹಿಳೆಯರು, 9 ಮಂದಿ ಮಕ್ಕಳಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 66 ಜನರಿಗೆ ಸೋಂಕು ಹರಡಿರುವುದು ಆತಂಕದ ಉಂಟು ಮಾಡಿದೆ.

ಉಡುಪಿ ನಗರಸಭೆ ಅಧಿಕಾರಿಯೊಬ್ಬರ ಗರ್ಭಿಣಿ ಪತ್ನಿ ಮತ್ತು ಮಗುವಿಗೆ ಕೋವಿಡ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆಯ ಎಲ್ಲ ಆರೋಗ್ಯ ಸಿಬ್ಬಂದಿ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.

ಸೋಮವಾರ 251 ಮಂದಿಯ ವರದಿ ನೆಗೆಟಿವ್ ಬಂದಿದೆ. 54 ಮಂದಿಯ ಗಂಟಲ ದ್ರವ ಮಾದರಿ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. 22 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 1650 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 213 ಮಂದಿಯ ವರದಿ ಬಾಕಿ ಇದ್ದು, 661 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net